ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಗುತ್ತಿಗಾರಿನ ಚಿಕ್ಮುಳಿ ಬಳಿ ನಡೆದಿದೆ.















ಗುತ್ತಿಗಾರಿನ ಚಿಕ್ಮುಳಿ ಬಳಿಯ ನಿವಾಸಿ ಕುಕ್ಕೆ ಸುಬ್ರಹ್ಮಣ್ಯದ ಕಾಲೇಜು ವಿದ್ಯಾರ್ಥಿನಿ ಪೂಜಾ ಮೃತಪಟ್ಟಾಕೆ. ಪೂಜಾ ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿದ್ದರು. ಅಸ್ವಸ್ಥಗೊಂಡ ಆಕೆಯನ್ನು ಎರಡು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತರು ತಂದೆ, ತಾಯಿ, ಸಹೋದರ, ಸಹೋದರಿ ಹಾಗೂ ಬಂಧುಗಳನ್ನು ಅಗಲಿದ್ದಾರೆ.










