ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ”ಸಂಪ್ರದಾ 2K25”

0

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು ಹಲವಾರು ತಿನಿಸುಗಳೊಂದಿಗೆ ಮನೋರನ್ಜನಾತ್ಮಕ ಕ್ರೀಡೆಗಳನ್ನು ಆಡುವುದರ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಟ್ರಡೀಷನಲ್ ಡೇ ಆಚರಿಸಲಾಯಿತು.

ಕಾರ್ಯಕ್ರಮವನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳಾದ ಅಡ್ವಕೇಟ್ ಅಶ್ವಿನ್ ಎಲ್. ಶೆಟ್ಟಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸವಣೂರು ಕೆ. ಸೀತಾರಾಮ ರೈ ಯವರು ಶುಭ ಹಾರೈಕೆಯ ಮಾತುಗಳನ್ನಾಡಿದರು.ಕಾರ್ಯಕ್ರಮವನ್ನು ಆಯೋಜಿಸಿದ ವಿದ್ಯಾರ್ಥಿವೃಂದಕ್ಕೆ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜಲಕ್ಷ್ಮಿ ಎಸ್ ರೈ ಯವರು ವಂದನೆಯನ್ನು ಸಲ್ಲಿಸಿದರು.

ಅತ್ಯುತ್ತಮ ಸಾಂಪ್ರಾದಾಯಿಕ ಉಡುಗೆ ಧರಿಸಿದ ವಿಜೇತರಾಗಿ ತೃತೀಯ ಬಿ.ಸಿ.ಎ ಯ ಪವನ್ ಕುಮಾರ್ ಹಾಗೂ ಪ್ರಸ್ತುತಿ ಆಯ್ಕೆಯಾದರು. ಇವರಿಗೆ ಕಸ್ತೂರಿ ಕಲಾ ರೈ ಯವರು ಬಹುಮಾನವನ್ನು ವಿತರಿಸಿದರು. ಟ್ರಷ್ಟಿಗಳಾದ ಶ್ರೀಮತಿ. ರಶ್ಮಿ ಅಶ್ವಿನ್ ಶೆಟ್ಟಿ ಉಪಪ್ರಾಂಶುಪಾಲರಾದ ಶ್ರೀಯುತ ಶೇಷಗಿರಿ ಎಂ ಉಪಸ್ಥಿತರಿದ್ದರು.