
ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ 46ನೇ ವರ್ಷದ ವಾರ್ಷಿಕ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ಸಂಸ್ಥೆಯ ಐಶ್ವರ್ಯ ಮದುವೆ ಗದ್ದೆ ಸಭಾಭವನದಲ್ಲಿ ನಡೆಯಿತು.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಅಧ್ಯಕ್ಷರಾದ ಡಾ. ಚಿದಾನಂದ .ಕೆ.ವಿ. ಕಾರ್ಯಕ್ರಮ ಉದ್ಘಾಟಿಸಿ, ಕರ್ನಾಟಕ ಅರೆ ಭಾಷೆ ಅಕಾಡೆಮಿಯ ಗೌರವ ಪ್ರಶಸ್ತಿಗೆ ಭಾಜನರಾದ ವಿಶ್ರಾಂತ ಪ್ರಾಂಶುಪಾಲರಾದ ಕೆ.ಆರ್.ಗಂಗಾಧರ್ ಅವರನ್ನು ಸನ್ಮಾನಿಸಿ, ಅಭಿನಂದನೆಯ ನುಡಿಗಳನ್ನು ಸಲ್ಲಿಸಿದರು.

ಸರ್ಕಾರಿ ಪದವಿ ಕಾಲೇಜು , ಪುತ್ತೂರು ಪ್ರಾಂಶುಪಾಲರಾದ ಪ್ರೊಫೆಸರ್ ಸುಬ್ಬಪ್ಪ ಕೈಕಂಬ,ದಿಕ್ಸೂಚಿ ಭಾಷಣ ಮಾಡಿದರು . ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ದಿವಾಕರ್ ರೈ ಅಧ್ಯಕ್ಷತೆ ವಹಿಸಿದ್ದರು.ಅತಿಥಿಗಳಾಗಿ ಅರಂತೋಡು ಗ್ರಾಮ ಪಂಚಾಯಿತ್ ಅಧ್ಯಕ್ಷ ಕೇಶವ ಆಡ್ತಲೆ, ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಎ. ಅಬ್ದುಲ್ಲ , ಕೋಶಾಧಿಕಾರಿ ಸಂಶುದ್ದಿನ್ , ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಕುರುಂಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ
ಶಿಕ್ಷಣ ಸಂಸ್ಥೆಯನ್ನು ಪ್ರತಿನಿಧಿಸಿದ ಹೆಮ್ಮೆಯ ವಿದ್ಯಾರ್ಥಿಗಳಾದ ಕೃತಿ ಕೆ.ಎಸ್., ಸುಮ ಕೆ.ಆರ್, ದೀಪ್ತಿ ಕೆ ಸಿ, ಚಂದನಾ,ಜಸ್ಮಿತಾ, ಚಿಂತನಾ, ಅವರಿಗೆ ಅಭಿನಂದನಾ ಸನ್ಮಾನ ನಡೆಯಿತು. ಸಂಸ್ಥೆಯ ಪ್ರಾಂಶುಪಾಲ ಸುರೇಶ್ ವಾಗ್ಲೆ ವರದಿ ವಾಚಿಸಿದರು.ಸಂಚಾಲಕ ಎ.ಸಿ.ವಸಂತ ಸ್ವಾಗತಿಸಿದರು.
















ಮುಖ್ಯಗುರು ಸೋಮಶೇಖರ ವಂದಿಸಿದರು.ಜಸ್ಮಿತಾ, ರೋಹಿಣಿ ಮತ್ತು ದೀಕ್ಷಾ ಪ್ರಾರ್ಥಿಸಿದರು.ವಿದ್ಯಾರ್ಥಿಗಳ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಕ್ರೀಡಾ ಸಾಧಕರಿಗೆ ದತ್ತಿನಿಧಿಗಳ ಪ್ರಶಸ್ತಿ ಪುರಸ್ಕಾರಗಳ ಪಟ್ಟಿಯನ್ನು ಪದ್ಮಕುಮಾರ್, ಮನೋಜ್ ಕುಮಾರ್,ಶಾಂತಿ ಎ.ಕೆ ವಾಚಿಸಿದರು..ಪ್ರತಿಭಾ ಪುರಸ್ಕಾರ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ವಿದ್ಯಾರ್ಥಿಗಳಿಂದ ನಡೆಯಿತು.
ಕಿಶೋರ್ ಕುಮಾರ್ ಕಿರ್ಲಾಯ ಮತ್ತು ಮೋಹನ್ ಚಂದ್ರ ಕಾರ್ಯಕ್ರಮ ನಿರೂಪಿಸಿದರು.
ಸಂಜೆ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಲೋಕೇಶ್ ಊರುಬೈಲ್ ನಿರ್ದೇಶನದ ಅರೆ ಭಾಷೆ ನಾಟಕ “ಅಪ್ಪ” ಪ್ರದರ್ಶನ ನಡೆಯಿತು.










