














ಸುಳ್ಯ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಖಾಲಿ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ನಡೆಸಲಾಗಿದ್ದು 7 ಅಂಗನವಾಡಿ ಕಾರ್ಯಕರ್ತೆಯರ ಮತ್ತು 18 ಅಂಗನವಾಡಿ ಸಹಾಯಕಿಯರ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ. ಇದರಲ್ಲಿ ಆಕ್ಷೇಪಣೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಡಿ:12 ರೊಳಗೆ ರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.










