ಕಾಯರ್ತೋಡಿ ದೇವಸ್ಥಾನದಲ್ಲಿ ಜಾತ್ರೋತ್ಸವ ಪ್ರಯುಕ್ತ ಪೂರ್ವಭಾವಿ ಸಭೆ

0

ಕಾಯರ್ತೋಡಿ ದೇವಸ್ಥಾನದಲ್ಲಿ ಜಾತ್ರೋತ್ಸವ ಪ್ರಯುಕ್ತ ಪೂರ್ವಭಾವಿ ಸಭೆಯು ಡಿ. ೭ರಂದು ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಕಾರ್ತಿಕ ಪೂಜೆಯ ಲೆಕ್ಕಾಚಾರ ಮಂಡನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರುಗಳು, ಸೇವಾ ಸಮಿತಿ ಅಧ್ಯಕ್ಷ ಕಿಶೋರ್‌ಕುಮಾರ್, ಮತ್ತು ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಊರ ಭಕ್ತಾದಿಗಳು ಸಭೆಯಲ್ಲಿ ಚರ್ಚಿಸಿ ಜಾತ್ರೋತ್ಸವದ ಬಗ್ಗೆ ಅಭಿಪ್ರಾಯ ಮಂಡಿಸಿದರು. ಜಾತ್ರೆಗಿಂತ ಮೊದಲು ಆಗಬೇಕಾದ ಕೆಲಸ ಕಾರ್ಯಗಳ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.
ವ್ಯವಸ್ಥಾಪನಾ ಸಮಿತಿ ಸದಸ್ಯ ಜತ್ತಪ್ಪ ರೈ ಸ್ವಾಗತಿಸಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ ಪ್ರಾಸ್ತಾವಿಕ ಮಾತನಾಡಿ ವಂದಿಸಿದರು. ವ್ಯ. ಸಮಿತಿ ಸದಸ್ಯೆ ಶೃತಿ ಮಂಜುನಾಥರವರು ಲೆಕ್ಕಾಚಾರ ಮಂಡನೆ ಮಾಡಿದರು.