















ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ಜನ್ಮಶತಾಭ್ಧಿಯ ಪ್ರಯುಕ್ತ ಶ್ರೀ ಸತ್ಯಸಾಯಿ ಸೇವಾ ಸಮಿತಿ ಚೊಕ್ಕಾಡಿ ಇವರ ನೇತೃತ್ವದಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಮಧ್ಯಾಹ್ನದ ಊಟ ಮತ್ತು ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ ಡಿ. ೭ರಂದು ನಡೆಯಿತು.

ಶ್ರೀ ಸತ್ಯಸಾಯಿ ಸೇವಾ ಟ್ರಸ್ಟ್ ಅಧ್ಯಕ್ಷ ಮಹಾಬಲೇಶ್ವರ ಭಟ್ ಕಾಂಚೋಡು, ಶ್ರೀ ಸತ್ಯಸಾಯಿ ಸೇವಾ ಸಮಿತಿ ಸಂಚಾಲಕ ತೇಜಪ್ರಕಾಶ್ ಬುಡ್ಲೆಗುತ್ತು, ಶ್ರೀ ಸತ್ಯಸಾಯಿ ವಿದ್ಯಾಕೇಂದ್ರದ ಪ್ರಾಂಶುಪಾಲ ಗುಣಶೇಖರ ಭಟ್, ಜಿಲ್ಲಾ ಯುವ ಸೇವಾ ಸಂಯೋಜಕಿ ವೀಣಾ ಕಾಂಚೋಡು, ಜಿಲ್ಲಾ ಯುವ ಸಂಯೋಜಕ ಉಮೇಶ್ ಹೂಳಿ, ಜಿಲ್ಲಾ ಶೈಕ್ಷಣಿಕ ಸಂಯೋಜಕ ಜಯರಾಮ ಭಾರಧ್ವಾಜ್, ಶ್ರೀ ಸತ್ಯಸಾಯಿ ಸೇವಾ ಸಮಿತಿಯ ಪದಾಧಿಕಾರಿಗಳು, ಸರ್ವ ಸದಸ್ಯರು, ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿವರ್ಗ, ವಿದ್ಯಾಕೇಂದ್ರದ ವಿದ್ಯಾರ್ಥಿನಿಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.











