
ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ 72 ನೇ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಮಂಜುಶ್ರೀ ಗೆಳೆಯರ ಬಳಗ ಪಾಲೆಪ್ಪಾಡಿ ಐವರ್ನಾಡುರವರ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆಯ ಬದಿಯಲ್ಲಿ ಮರ್ವತಡ್ಕದವರೆಗೆ ಡಿ.07 ರಂದು ನಡೆಯಿತು.
















ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ ಸಿಬ್ಬಂದಿಗಳು ಹಾಗೂ ಮಂಜುಶ್ರೀ ಗೆಳಯರ ಬಳಗ ಪಾಲೆಪ್ಪಾಡಿ ಇದರ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಊರಿನ ಪ್ರಮುಖರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದವರೆಲ್ಲರಿಗೂ ಮಂಜುಶ್ರೀ ಗೆಳೆಯರ ಬಳಗದ ವತಿಯಿಂದ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.











