
ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟವನ್ನು ಡಿ .6 ರಂದು ಆಚರಿಸಲಾಯಿತು.
ಸಭಾ ಕಾರ್ಯಕ್ರಮದಲ್ಲಿ ಶಾಲಾ ಜೊತೆ ಕಾರ್ಯದರ್ಶಿ ಫಾದರ್ ಆಲ್ವಿನ್ ಎಡ್ವರ್ಡ್ ಡಿಕುನ್ಹ, ಮುಖ್ಯ ಅತಿಥಿಗಳಾದ ಕೆವಿಜಿ ಡೆಂಟಲ್ ಕಾಲೇಜಿನ ಹೆಚ್ ಒ ಡಿ ಡಾಕ್ಟರ್ ಸವಿತಾ ಸತ್ಯಪ್ರಸಾದ್, ಮುಖ್ಯೋಪಾಧ್ಯಾಯನಿ ಸಿಸ್ಟರ್ ಮೇರಿ ಸ್ಟೆಲ್ಲಾ, ಪ್ರಾಥಮಿಕ ವಿಭಾಗದ ಪೋಷಕ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ಸುನಿತಾ ಮೊಂತೆರೊ, ಪೂರ್ವ ಪ್ರಾಥಮಿಕ ಪೋಷಕ ಸಮಿತಿಯ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
















ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಸ್ಟೆಲ್ಲಾ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಸುಮತಿಯವರು ವಂದಿಸಿದರು. ಶಿಕ್ಷಕಿಯರಾದ ಶ್ರೀಮತಿ ಗೀತಾ ಲಕ್ಷ್ಮಿ ಮತ್ತು ಶ್ರೀಮತಿ ಯಶ್ವಿತಾ ರವರು ಕಾರ್ಯಕ್ರಮ ನಿರೂಪಿಸಿದರು. ಪುಟಾಣಿಗಳಿಂದ ಪಥ ಸಂಚಲನ ಮತ್ತು ನೃತ್ಯವನ್ನು ಆಯೋಜಿಸಲಾಯಿತು ನಂತರ ತರಗತಿವಾರು ಪುಟಾಣಿಗಳಿಗೆ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು . ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೆ ಪದಕ ಮತ್ತು ಪ್ರಮಾಣ ಪತ್ರವನ್ನು ನೀಡಿ ಅಭಿನಂದಿಸಲಾಯಿತು.










