ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕ್ಯಾಲೆಂಡರ್ ಮತ್ತು ಆರೋಗ್ಯ ಶಿಬಿರದ ಕರಪತ್ರ ಬಿಡುಗಡೆ ಕಾರ್ಯಕ್ರಮ

0

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2026 ರ ಕ್ಯಾಲೆಂಡರ್ ಬಿಡುಗಡೆ ಮತ್ತು ಜ.4 ರಂದು ಸಂಘದ ಸಭಾಭವನದಲ್ಲಿ ನಡೆಯಲಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರದ ಕರಪತ್ರ ಬಿಡುಗಡೆ ಕಾರ್ಯಕ್ರಮ ಡಿ.9 ರಂದು ಸಂಘದ ಸಭಾಭವನದಲ್ಲಿ ನಡೆಯಿತು.


ಈ ವೇಳೆ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ, ಉಪಾಧ್ಯಕ್ಷ ಸದಾನಂದ ಕಾರ್ಜ, ನಿರ್ದೇಶಕರಾದ ಸುಬ್ರಹ್ಮಣ್ಯ ಕುಳ, ಲಿಗೋಧರ ಆಚಾರ್ಯ, ವಾಚಣ್ಣ ಕೆರೆಮೂಲೆ, ಚಿನ್ನಪ್ಪ ಗೌಡ ಚೊಟ್ಟೆಮಜಲು, ಅರುಣ್ ರೈ ಗೆಜ್ಜೆ, ವಾಸುದೇವ ಕೆರೆಕ್ಕೋಡಿ, ತಿಮ್ಮಪ್ಪ ಕೂತ್ಕುಂಜ, ಶ್ರೀಮತಿ ವನಿತಾ ಅತ್ಯಡ್ಕ, ಶ್ರೀಮತಿ ಬೇಬಿ ಕಟ್ಟ, ಮುದರ ಐವತ್ತೊಕ್ಲು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ, ಸಿಬ್ಬಂದಿಗಳು, ಸದಸ್ಯರು, ಮೊದಲಾದವರು ಉಪಸ್ಥಿತರಿದ್ದರು.