ಜನವರಿ 17 &18 ವಿಜೃಂಭಣೆಯ “ಯುವ ಸಂಭ್ರಮ”
ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ (ರಿ.) ಬೆಂಗಳೂರು ,ದ.ಕ. ಜಿಲ್ಲಾ ಯುವಜನ ಒಕ್ಕೂಟ (ರಿ.) ಮಂಗಳೂರು, ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಜನ ಸಂಯುಕ್ತ ಮಡಳಿ (ರಿ.) ಸುಳ್ಯ ಇದರ ಆಶ್ರಯದಲ್ಲಿ ಜ.17 ಮತ್ತು ಜ.18 ರಂದು ಪಂಜದಲ್ಲಿ ನಡೆಯಲಿರುವ ರಾಜ್ಯಮಟ್ಟದ “ಯುವ ಸಂಭ್ರಮ – 2026″ರ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಡಿ.8 ರಂದು ಪಂಜ ಲಯನ್ಸ್ ಭವನದಲ್ಲಿ ನಡೆಯಿತು.















ಮಾಡ ಬಾಗಿಲು ಕಂಬಳ ಆನಂದ ಟ್ರಸ್ಟ್(ರಿ) ನ ಅಧ್ಯಕ್ಷ ಬಿ ಎಂ ಆನಂದ ಗೌಡ ಕಂಬಳ ರವರು ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿದರು. ಯುವ ಸಂಭ್ರಮ- 2026 ರ ಸಂಘಟನಾ ಸಮಿತಿಯ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು ಸಭಾಧ್ಯಕ್ಷತೆ ವಹಿಸಿದ್ದರು.ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ, ದ.ಕ.ಜಿಲ್ಲಾ ಯುವಜನ ಒಕ್ಕೂಟದ ಸುರೇಶ್ ಸೂಡಿಮುಳ್ಳು, ಸ್ವಾಗತ ಸಮಿತಿ ಅಧ್ಯಕ್ಷ ಮಾಧವ ಗೌಡ ಜಾಕೆ, ಸ್ವಾಗತ ಸಮಿತಿಯ ಶ್ರೇಯಾಂಸ್ ಕುಮಾರ್ ಶೆಟ್ಟಿಮೂಲೆ, ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮತ್ತು ಸಂಘಟನಾ ಸಮಿತಿ ಉಪಾಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಯುವ ಜನ ಸಂಯುಕ್ತ ಮಂಡಳಿ ಕೋಶಾಧ್ಯಕ್ಷ ಲೋಹಿತ್ ಬಾಳಿಕಳ, ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಗಿರಿಶಂಕರ್ ಸುಲಾಯ, ಯುವ ಸಂಭ್ರಮ ಸಂಘಟನಾ ಸಮಿತಿಯ ಕಾರ್ಯದರ್ಶಿ ವಿಜೇಶ್ ಹಿರಿಯಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುವಜನ ಸಂಯುಕ್ತ ಮಂಡಳಿ ಪದಾಧಿಕಾರಿಗಳು, ಸಂಘಟನಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ ಸ್ವಾಗತಿಸಿದರು. ಯುವ ಸಂಭ್ರಮ 2026 ರ ಸಂಘಟನಾ ಸಮಿತಿಯ ಕಾರ್ಯದರ್ಶಿ ವಿಜೇಶ್ ಹಿರಿಯಡ್ಕ ವಂದಿಸಿದರು.










