ಕೆ ಎಸ್ ಎಸ್ ಕಾಲೇಜಿನಲ್ಲಿ ಅರೆಭಾಷೆ ದಿನಾಚರಣೆ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಹಯೋಗದೊಂದಿಗೆ ಆಂತರಿಕ ಗುಣಮಟ್ಟ ಭರವಸಾಕೋಶದ ಅಡಿಯಲ್ಲಿ ಅರೆಭಾಷೆ ಸಂಘದ ವತಿಯಿಂದ ಅರೆ ಭಾಷೆ ದಿನಾಚರಣೆ ಕಾರ್ಯಕ್ರಮ ಡಿ.8 ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ ವಹಿಸಿದರು. ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಹಾಗೂ ಕೊಡಗು ಗೌಡ ಸಮಾಜ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ ಅವರು ಉದ್ಘಾಟಿಸಿ ಭಾಷೆಯನ್ನು ಉಳಿಸಿ ಬೆಳೆಸಲು ಮಕ್ಕಳ ಪಾತ್ರ ಅತಿ ಮುಖ್ಯವಾದದ್ದು ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿ ಡಾ.ವಿಶ್ವನಾಥ ಬದಿಕಾನ ಭಾಷೆಯೊಂದಿಗೆ ಸಂಸ್ಕೃತಿಯು ಹುಟ್ಟಿಕೊಳ್ಳುತ್ತದೆ ಎಂದು ತಿಳಿಸಿದರು ಹಾಗೂ ಕರ್ನಾಟಕ ಅರೆಭಾಷೆಯ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಾಜಿ ಅವರು ಅರೆಭಾಷೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಪದವಿಪೂರ್ವ ಕಾಲೇಜಿನ ಅರೆಭಾಷೆ ಸಂಘದ ಸಂಯೋಜಕಿ ಶ್ರೀಮತಿ ಸೌಮ್ಯ ಹಾಗೂ ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಶ್ರೀಮತಿ ಲತಾ ಬಿ. ಟಿ ಮತ್ತು ಡಾ. ರಾಘವ ಗೌಡ ಗುಡ್ಡೆಮನೆ ಉಪಸ್ಥಿತರಿದ್ದರು. ಅರೆಭಾಷೆಯ ದಿನಾಚರಣೆಯ ವತಿಯಿಂದ ವಿದ್ಯಾರ್ಥಿಗಳಿಗೆ ಅರೆಭಾಷೆ ಹಾಡು, ನೃತ್ಯ, ವೀಳ್ಯ ಶಾಸ್ತ್ರದ ಒಕ್ಕಣೆ, ಶೋಭಾನೆ ಮತ್ತು ಗೋಡೆ ಹಸೆ ಬರೆಯುವ ಸ್ಪರ್ಧೆಗಳನ್ನು ಹಮ್ಮಿಕೊಂಡು ವಿಜೇತರಾದವರಿಗೆ ಬಹುಮಾನವನ್ನು ನೀಡಲಾಯಿತು. ಕೆ ಎಸ್ ಎಸ್ ಕಾಲೇಜಿನ ಅರೆಭಾಷೆ ಸಂಘದ ಸಂಯೋಜಕಿ ಶ್ರೀಮತಿ ಸುಮಿತ್ರ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಸಂಖ್ಯಾ ನಿರೂಪಿಸಿ, ಸ್ನೇಹಲ್ ವಂದಿಸಿದರು.