
ಸುಳ್ಯ ಪಟ್ಟಣ ಪಂಚಾಯತ್
ವ್ಯಾಪ್ತಿಯಲ್ಲಿ ಬೀದಿನಾಯಿಗಳಿಗೆ ನಿಯಮಿತವಾಗಿ ಆಹಾರ ನೀಡುವವರು ಪಂಚಾಯತ್ ನಿಂದ ಗುರುತಿನ ಚೀಟಿ ಪಡೆಯಬೇಕೆಂದು ಪಂಚಾಯತ್ ಮುಖ್ಯಾಧಿಕಾರಿ ಆದೇಶ ಹೊರಡಿಸಿದ್ದಾರೆ.















ಸುಳ್ಯ ನಗರದಲ್ಲಿ ಬೀದಿ ನಾಯಿಗಳ ಸಂಖ್ಯೆ, ಕಾಟ ಹೆಚ್ಚಾಗುತ್ತಿದ್ದು ಇದನ್ನು ನಿಯಂತ್ರಣ ಮಾಡಲು ಪಂಚಾಯತ್ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಮುಖ್ಯವಾಗಿ ನಗರದ ಸಾರ್ವಜನಿಕ ಸ್ಥಳದಲ್ಲಿ ಕೆಲವು ಶ್ವಾನ ಪ್ರಿಯರು ಬೀದಿನಾಯಿಗಳಿಗೆ ಆಹಾರ ನೀಡುತ್ತಿರುವ ಬಗ್ಗೆ ದೂರು ಬಂದಿದ್ದು, ಅನಧಿಕೃತವಾಗಿ ರಸ್ತೆಯ ಬದಿ, ಚರಂಡಿಗಳ ಮೇಲೆ, ಶಾಲಾ ವಠಾರದಲ್ಲಿ, ಜನ ನಿಬಿಡ ಪ್ರದೇಶಗಳಲ್ಲಿ ಬಸ್ ಬಸ್ ನಿಲ್ದಾಣ ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ಸಾರ್ವಜನಿಕರು ಬೀದಿ ನಾಯಿಗಳಿಗೆ ಆಹಾರ ಹಾಕುವುದನ್ನು ನಿಷೇಧಿಸಲಾಗಿದೆ. ನಾಯಿಗಳ ಸಂತಾನಹರಣ ಚಿಕಿತ್ಸೆ (ಎಬಿಸಿ) ನಿಯಮಗಳು 202) ರ ಸೆಕ್ಷನ್ 20 (1) (ಬಿ) ಪ್ರಕಾರ ಸುಳ್ಯ ನಗರ ವ್ಯಾಪ್ತಿ ನಾಯಿಗಳನ್ನು ಗುರುತಿಸಬೇಕಾಗಿದೆ . ಆದುದರಿಂದ ಸುಳ್ಯ ನಗರ ವ್ಯಾಪ್ತಿಯಲ್ಲಿ ಬೀದಿನಾಯಿಗಳಿಗೆ ನಿಯಮಿತವಾಗಿ ಆಹಾರ ನೀಡುವವರಾಗಿದ್ದರೆ ಡಿಸೆಂಬರ್ 14 ಅಪರಾಹ್ನ 12 ಗಂಟೆಯೊಳಗೆ ಸುಳ್ಳ ಕಚೇರಿಗೆ ಬಂದು ಬೀದಿನಾಯಿಗಳಿಗೆ ಆಹಾರ ನೀಡುತ್ತಿರುವ ಸ್ಥಳಗಳ ಬಗ್ಗೆ ಮಾಹಿತಿ ನೀಡಿ ವಂಚಾಯತ್ ನಿಂದ ಗುರುತಿನ ಚೀಟಿ ಪಡೆದುಕೊಳ್ಳತಕ್ಕದ್ದು. ತಪ್ಪಿದಲ್ಲಿ ನಿಯಾಮಾಮಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಾಧಿಕಾರಿ ತಿಳಿಸಿದ್ದಾರೆ.









