ಅಧ್ಯಕ್ಷರಾಗಿ ಕುಶಾಲಪ್ಪ ಗೌಡ-ಪ್ರಧಾನ ಕಾರ್ಯದರ್ಶಿ ಸುಪ್ರೀತ್ ಮೋಂಟಡ್ಕ ಆಯ್ಕೆ
ಸುಳ್ಯ ನಗರದ ಕೇರ್ಪಳ ವಸಂತ ಕಟ್ಟೆಯ ಪದಾಧಿಕಾರಿಗಳ ಸಭೆಯು ಡಿ.10ರಂದು ನಡೆಯಿತು.








ಸಮಿತಿ ಅಧ್ಯಕ್ಷ ಬಾಲಕೃಷ್ಣ ಎಸ್.ಬಿ. ಲ್ಯಾಬ್ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ನೂತನ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಕೇರ್ಪಳ, ಪ್ರಧಾನ ಕಾರ್ಯದರ್ಶಿಯಾಗಿ ಸುಪ್ರೀತ್ ಮೋಂಟಡ್ಕ ಹಾಗೂ ಕೋಶಾಧಿಕಾರಿಯಾಗಿ ವಿನಯ್ ಕೇರ್ಪಳ ಆಯ್ಕೆಯಾದರು.
ಕಾರ್ಯದರ್ಶಿ ಸುನಿಲ್ ಕೇರ್ಪಳ ಸ್ವಾಗತಿಸಿದರು. ಚಂದ್ರಪ್ರಕಾಶ್ ಕೇರ್ಪಳ ಲೆಕ್ಕಪತ್ರ ಮಂಡಿಸಿದರು. ನೂತನ ಕಾರ್ಯದರ್ಶಿ ಸುಪ್ರೀತ್ ಮೋಂಟಡ್ಕ ವಂದಿಸಿದರು.










