
ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್, ಮಂಗಳೂರು ಇನ್ಸಿಟ್ಯೂಟ್ ಆಫ್ ಆಂಕೊಲಜಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಸುಳ್ಯ ವತಿಯಿಂದ ಕ್ಯಾನ್ಸರ್ ಜಾಗೃತಿ ಅಭಿಯಾನ ಇದರ ಅಂಗವಾಗಿ ಡಿ. 13, ಶನಿವಾರ ದಂದು ಸುಳ್ಯದ ಪ್ರಮುಖ ರಸ್ತೆಗಳಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ ನಡೆಯಲಿದೆ.








ಜಾಥಾಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡರವರು ಚಾಲನೆ ನೀಡಲಿದ್ದಾರೆ.
ರಥಬೀದಿಯ ಬಿಎಸ್‌ಎನ್‌ಎಲ್ ಕಛೇರಿ ಹತ್ತಿರದ ಅಶ್ವಿನಿ ಕಾಂಪ್ಲೆಕ್ಸ್ ನಲ್ಲಿರುವ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ನ ಕ್ಯಾನ್ಸರ್ ಮಾಹಿತಿ ಕೇಂದ್ರದಲ್ಲಿ ಕ್ಯಾನ್ಸರ್ ಸಮೀಕ್ಷೆ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









