ಕ್ರೀಡೆಯಿಂದ ಮಾನಸಿಕ- ದೈಹಿಕ ವಿಕಸನ ಸಾಧ್ಯ: ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ
ಪಠ್ಯ ಚಟುವಟಿಕೆಗಳೊಂದಿಗೆ ಕ್ರೀಡಾ ಕೂಟಗಳು ವಿದ್ಯಾರ್ಥಿಗಳ ಮಾನಸಿಕ – ದೈಹಿಕ ವಿಕಸನಕ್ಕೆ ಪೂರಕ ಎಂದು ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಶಾಲಾ ಸಂಚಾಲಕ ಸದಾನಂದ ಮಾವಜಿ ಹೇಳಿದರು.









ಅವರು ಶನಿವಾರ ನಡೆದ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.
ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಸದಾನಂದ ಜಾಕೆ ವಹಿಸಿ, ಮಾತನಾಡಿ, ಕ್ರೀಡಾಕೂಟ ಜಾತಿ, ಧರ್ಮ ವನ್ನು ಮೀರಿ ಇಡೀ ಸಮಾಜವನ್ನು ಒಗ್ಗೂಡಿಸುತ್ತದೆ ಎಂದರು.
ವೇದಿಕೆಯಲ್ಲಿ ಶಾಲಾ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್ ಇದ್ದರು. ಶಿಕ್ಷಕಿ ಮೀನ ಕುಮಾರಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ ಕೆ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿಗಳಿಗೆ ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ಶಿಕ್ಷಕರಾದ ಶಿವಪ್ರಕಾಶ ಕೆ., ಕುಮಾರ ಲಮಾಣಿ, ಸವಿತಾ ಕುಮಾರಿ, ಪ್ರಶಿಕ್ಷಣಾರ್ಥಿಗಳಾದ ನಿಶ್ಮಿತಾ ಕೆ. ಯಜ್ಞ ಎಂ., ಸಿಬ್ಬಂದಿ ಬೇಬಿ.ಕೆ ಕಾರ್ಯಕ್ರಮಕ್ಕೆ ಸಹಕರಿಸಿದರು.










