ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ

0

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ 2025 – 26 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಡಿ.13ರಂದು ಜರಗಿತು.
ವಿದ್ಯಾರ್ಥಿಗಳು ಸಮಾವೇಶಗೊಂಡು ಕ್ರೀಡಾ ಜ್ಯೋತಿಯೊಂದಿಗೆ ಆಗಮಿಸಿದರು. ಬಳಿಕ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆಯವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸ್ಥೆಯ ದೈಹಿಕ ಶಿಕ್ಷಕ ಚಂದ್ರಶೇಖರ ಮೂಕಮಲೆಯವರು ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ಡಾ. ದಾಮ್ಲೆಯವರು “ಕ್ರೀಡಾಕೂಟದಲ್ಲಿ ಪ್ರತಿಯೊಬ್ಬನೂ ಕ್ರೀಡಾ ಸ್ಫೂರ್ತಿಯಿಂದ ಭಾಗವಹಿಸಬೇಕು. ಕ್ರೀಡೆಯು ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿರುತ್ತದೆ” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆಯವರು ಸ್ವಾಗತಿಸಿ ಸಹ ಶಿಕ್ಷಕಿ ಶ್ರೀಮತಿ ಸವಿತಾ ಎಂ ವಂದಿಸಿದರು. ಶಿಕ್ಷಕಿ ಶ್ರೀಮತಿ ವನಿತಾ ಯತೀಶ್ ಮತ್ತು ಶಿಕ್ಷಕ ದೇವಿಪ್ರಸಾದ ಜಿ ಸಿ ನಿರೂಪಿಸಿದರು.
ಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳು ಜರಗಿದ ಬಳಿಕ ಪೋಷಕರಿಗೆ ಹಗ್ಗ ಜಗ್ಗಾಟ, ಲಕ್ಕಿ ಗೇಮ್ ಮತ್ತು ಗುಂಡೆಸೆತ ಸ್ಪರ್ಧೆಗಳು ಜರಗಿದವು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಲ್ಲರಿಗೂ ಸಿಹಿ ತಿಂಡಿ ಮತ್ತು ಹಣ್ಣುಗಳನ್ನು ವಿತರಿಸಲಾಯಿತು.