ಶಿಕ್ಷಣದೊಂದಿಗೆ ರಾಷ್ಟ್ರೀಯ ಚಿಂತನೆಗೆ ಜ್ಞಾನ ದೀಪ ಸಂಸ್ಥೆಯ ಕೊಡುಗೆ ಅಪಾರ : ಕಟೀಲ್
ಭಾರತೀಯ ಶಿಕ್ಷಣ ಜ್ಞಾನ ಸಂಪನ್ನತೆ ಮತ್ತು ಮೌಲ್ಯಗಳ ಆಗರ. ಈ ಶಿಕ್ಷಣದ ಜತೆಗೆ ರಾಷ್ಟ್ರೀಯತೆಯ ಚಿಂತನೆಯ ಮೂಲಕ ಜ್ಞಾನದೀಪ ವಿದ್ಯಾ ಸಂಸ್ಥೆ ದೇಶಕ್ಕೆ ಉತ್ತಮ ಕೊಡುಗೆ ನೀಡುತ್ತಿದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಎಲಿಮಲೆಯ ಜ್ಞಾನದೀಪ ವಿದ್ಯಾಸಂಸ್ಥೆಗಳ 2025 – 26 ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜ್ಞಾನದೀಪ ವಿದ್ಯಾಸಂಸ್ಥೆಗಳ ಅಧ್ಯಕ್ಷ ಚಂದ್ರಶೇಖರ ತಳೂರು ಅಧ್ಯಕ್ಷತೆ ವಹಿಸಿ ಮಾತನಾಡಿ ಮುಂದಿನ ವರ್ಷ ಬೆಳ್ಳಿ ಹಬ್ಬ ಸಂಭ್ರಮಕ್ಕೆ ಕಾಲಿಡಲಿರುವ ಈ ವಿದ್ಯಾ ಸಂಸ್ಥೆಗೆ ಎಲ್ಲರ ಸಹಕಾರ ಬೇಕು ಎಂದರು.








ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ ಕೆರೆಮೂಲೆ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ವಿನಯ್ ಮುಳುಗಾಡು ಅತಿಥಿಗಳಾಗಿ ಉಪಸ್ಥಿತರಿದ್ದರು.

ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀಧರ ಕೆರೆಮೂಲೆ ಹಾಗೂ ಕ್ಯಾಂಪ್ಕೊ ನಿರ್ದೇಶಕರಾಗಿ ಆಯ್ಕೆಗೊಂಡ ಶಾಲಾ ಸಂಚಾಲಕ ಎ.ವಿ. ತೀರ್ಥರಾಮರವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ, ದತ್ತಿನಿಧಿ ವಿತರಣೆ ನಡೆಯಿತು.
ಶಾಲಾ ಸಂಚಾಲಕ ಎ.ವಿ. ತೀರ್ಥರಾಮ ಸ್ವಾಗತಿಸಿ ಪ್ರಸ್ತಾವನೆಗೈದರು. ಶಾಲಾ ಮುಖ್ಯೋಪಾಧ್ಯಾಯ ಗದಾಧರ ಬಾಳುಗೋಡು ವರಧಿ ವಾಚಿಸಿದರು. ಶಿಕ್ಷಕಿ ಶ್ರೀಮತಿ ಸುಧಾರಾಣಿ ವಂದಿಸಿದರು ಶಿಕ್ಷಕರಾದ ಅಚ್ಯುತ ಅಟ್ಲೂರು, ಶ್ರೀಮತಿ ರೇಖಾ ಕಿರಣ್ ಕಾರ್ಯಕ್ರಮ ನಿರೂಪಿಸಿದರು.
ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪದ್ಮನಾಭ ಮೀನಾಜೆ, ಶಾಲಾ ವಿದ್ಯಾರ್ಥಿ ನಾಯಕ ಶ್ರೇಯಸ್ ಎಂ.ಪಿ., ಜ್ಞಾನದೀಪ ವಿದ್ಯಾ ಸಂಸ್ಥೆಯ ನಿರ್ದೇಶಕ ರಾಧಾಕೃಷ್ಣ ಮಾವಿನಕಟ್ಟೆ, ವಿಶ್ವಸ್ಥ ಮಂಡಳಿಯ ಸದಸ್ಯ ಡಿ.ಟಿ.ದಯಾನಂದ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಾರ್ಷಿಕೋತ್ಸವದ ಪ್ರಯುಕ್ತ ಬೆಳಿಗ್ಗೆ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ತಿರುಮಲೇಶ್ವರಿ ಕುಳ್ಳಂಪ್ಪಾಡಿ ಧ್ವಜಾರೋಹಣ ಗೈದರು.
ಸಂಗೀತ ರಸಮಂಜರಿ, ವಿದ್ಯಾರ್ಥಿಗಳಿಂದ ಯಕ್ಷಗಾನ, ನೃತ್ಯ, ಪ್ರಹಸನ, ಯೋಗ, ಕೋಲಾಟ, ನೃತ್ಯ ರೂಪಕಗಳ ಸಹಿತ ವೈವಿದ್ಯಮಯ ಕಾರ್ಯಕ್ರಮಗಳು ನೆರವೇರಿತು.










