ವಿದ್ಯಾರ್ಥಿಗಳ ಪ್ರತಿಭೆಗಳ ಅನಾವರಣಕ್ಕೆ ಸೂಕ್ತ ವೇದಿಕೆಯೇ ಪ್ರತಿಭೋತ್ಸವ: ಸದಾನಂದ ಮಾವಜಿ
ಪಠ್ಯ ಚಟುವಟಿಕೆಗಳೊಂದಿಗೆ ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಹೊರಸೂಸುವುದಕ್ಕೆ ಪ್ರತಿಭೋತ್ಸವ ಸೂಕ್ತ ವೇದಿಕೆಯಾಗಿದೆ ಎಂದು ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಶಾಲಾ ಸಂಚಾಲಕ ಸದಾನಂದ ಮಾವಜಿ ಹೇಳಿದರು.









ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ಪ್ರತಿಭೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ವೇದಿಕೆಯಲ್ಲಿ ಶಾಲಾ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್ , ಎಸ್. ಡಿ.ಎಂ ಸಿ ಅಧ್ಯಕ್ಷ ಚಂದ್ರಶೇಖರ ಇದ್ದರು. ಶಿಕ್ಷಕರಾದ ಮೀನ ಕುಮಾರಿ, ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ ಕೆ, ಶಿವಪ್ರಕಾಶ ಕೆ., ಕುಮಾರ ಲಮಾಣಿ, ಸವಿತಾ ಕುಮಾರಿ, ಪ್ರಶಿಕ್ಷಣಾರ್ಥಿಗಳಾದ ನಿಶ್ಮಿತಾ ಕೆ. ಯಜ್ಞ ಎಂ., ಸಿಬ್ಬಂದಿ ಬೇಬಿ.ಕೆ ಕಾರ್ಯಕ್ರಮಕ್ಕೆ ಸಹಕರಿಸಿದರು. ಇದೇ ವೇಳೆ ನಾನಾ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ನಾನಾ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.










