ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರಾ‌ ಮಹೋತ್ಸವ – ಬ್ರಹ್ಮ ರಥೋತ್ಸವ

0

ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಡಿ. 16ರಂದು ಆರಂಭಗೊಂಡಿದ್ದು, ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಡಿ. 16ರಂದು ಸಂಜೆ‌ ಧ್ವಜಾಅವರೋಣದೊಂದಿಗೆ ಸಂಪನ್ನಗೊಳ್ಳಲಿದೆ.
ಡಿ. 15ರಂದು ಸಂಜೆ ವಿಜೃಂಭಣೆಯ ಬ್ರಹ್ಮ ರಥೋತ್ಸವ ನಡೆಯಿತು. ದೇವಸ್ಥಾನದ ಆಡಳಿತ ಮೊಕ್ತೇಸರರು ಮತ್ತು ಪ್ರಧಾನ ಅರ್ಚಕರಾದ ಶ್ರೀವತ್ಸ ಎಂ.ವಿ, ಉತ್ಸವ ಸಮಿತಿ ಗೌರವಾಧ್ಯಕ್ಷ ಭಾಸ್ಕರ ಗೌಡ ಪಂಡಿ, ಅಧ್ಯಕ್ಷ ಸುಬ್ರಹ್ಮಣ್ಯ ಕುಳ ಸೇರಿದಂತೆ ವಿವಿಧ ಸಮಿತಿಗಳ‌ ಪದಾಧಿಕಾರಿಗಳು, ಬೈಲುವಾರು ಸಮಿತಿಗಳ ಸಂಚಾಲಕರು, ಸದಸ್ಯರು, ಭಕ್ತಾದಿಗಳು ಜಾತ್ರೋತ್ಸವದಲ್ಲಿ ಪಾಲ್ಗೊಂಡರು.