








ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಧನುರ್ಮಾಸದ ಒಂದು ತಿಂಗಳ ಕಾಲ ನಡೆಯಲಿರುವ ಧನು ಪೂಜೆ ಇಂದು ಬೆಳಿಗ್ಗೆ ಆರಂಭಗೊಂಡಿತು.

ಬೆಳಿಗ್ಗೆ ಗಂಟೆ 5 ಕ್ಕೆ ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು. ಬಳಿಕ ಪ್ರಸಾದ ವಿತರಣೆ,ಉಪಹಾರ ನೆರವೇರಿತು.ದೇವಳದ ವಿವಿಧ ಸಮಿತಿಯವರು, ಭಕ್ತಾದಿಗಳು ಉಪಸ್ಥಿತರಿದ್ದರು. ಕಾಯರ್ತೋಡಿಯ ಶ್ರೀ ಮಹಾವಿಷ್ಣು ಭಜನಾ ಮಂಡಳಿಯವರು ಭಜನೆ ನಡೆಸಿದರು.










