ಗೋಪೂಜೆ ಮತ್ತು ದೀಪಾವಳಿ ಆಚರಣೆ
ಮೈಸೂರಿನ ದಕ್ಷಿಣ ಕನ್ನಡ ಜಿಲ್ಲಾ ಗೌಡ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ, ಸಂಘದ ಕಿರು ಹೊತ್ತಿಗೆ ಬಿಡುಗಡೆ, ಗೋಪೂಜೆ ಮತ್ತು ದೀಪಾವಳಿ ಸಾಂಕೇತಿಕ ಆಚರಣೆ ಡಿ. 21ರಂದು ಮೈಸೂರಿನ ಕುವೆಂಪು ನಗರದಲ್ಲಿರುವ ಉತ್ತರ ಕನ್ನಡ ಜಿಲ್ಲಾ ಸಾಂಸ್ಕೃತಿಕ ಸಂಘದ ಸಭಾಂಗಣದಲ್ಲಿ ನಡೆಯಲಿದೆ.









ದ.ಕ.ಜಿಲ್ಲಾ ಗೌಡ ಸಂಘದ ಅಧ್ಯಕ್ಷ ವಿಶ್ವನಾಥ ದೇವಸ್ಯ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ. ಯು.ಪಿ. ಶಿವಾನಂದ, ಲೇಖಕಿ ಶ್ರೀಮತಿ ತಾರಿಣಿ ಚಿದಾನಂದ, ದಕ್ಷಿಣ ಕನ್ನಡ ಮತ್ತು ಕರಾವಳಿ ಜಿಲ್ಲಾ ಸಂಘಗಳ ಒಕ್ಕೂಟದ ಅಧ್ಯಕ್ಷ ಗ್ರೇಸಿಯನ್ ರೋಡ್ರಿಗಸ್ ಹಾಗೂ ಉತ್ತರ ಕನ್ನಡ ಜಿಲ್ಲಾ ಸಾಂಸ್ಕೃತಿಕ ಸಂಘದ ಮಾಜಿ ಕಾರ್ಯದರ್ಶಿ ತೇಜಸ್ವಿ ನಾಯಕ್ ಭಾಗವಹಿಸಲಿದ್ದಾರೆ.
ಇದೇ ಸಂದರ್ಭ ಭಾರತೀಯ ನೌಕಾಪಡೆಯ ಸಬ್ ಲೆಫ್ಟಿನೆಂಟ್ ಕು. ಸಂಜನಾ ಕೆ.ಎಸ್ ರವರಿಗೆ ಸನ್ಮಾನ ನಡೆಯಲಿದೆ.



