ಸುಳ್ಯದ ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡೋತ್ಸವ – 2025 ಡಿ. 16ರಂದು ಎನ್ಎಂಸಿ ಕ್ರೀಡಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತಾಧಿಕಾರಿ ಪ್ರೊ.ಕೆ.ವಿ ದಾಮೋದರ ಗೌಡ ವಹಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ
ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯದ ಅನಸ್ತೇಶಿಯಾಲಜಿ ವಿಭಾಗದ ಪ್ರಾಧ್ಯಾಪರು ಹಾಗೂ ಮುಖ್ಯಸ್ಥರಾದ ಪ್ರೊ.ಡಾ. ಬೀನಾ ರಾಣಿ ಚೆಮ್ಮಾಂಚೆರಿ ಭಾಗವಹಿಸಿ ಶುಭ ಹಾರೈಸಿದರು.









ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಟೀನಾ ಹೆಚ್.ಎಸ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಕಲಾವತಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ರಮ್ಯಾ ಕೆ. ಎಂ ಹಾಗೂ ಚಂದನ ಪಿ.ಎಸ್ ಪ್ರಾರ್ಥಿಸಿದರು. ಪ್ರೊ. ಟೀನಾ ಹೆಚ್. ಎಸ್ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಧಿಕಾರಿ ಉಪನ್ಯಾಸಕಿ ಕಲಾವತಿ ವಂದಿಸಿದರು.

ವಿದ್ಯಾರ್ಥಿ ಕ್ರೀಡಾ ಕಾರ್ಯದರ್ಶಿ ಉಮ್ಮರ್ ಮುಕ್ತಾರ್ ಪ್ರತಿಜ್ಞಾ ವಿಧಿ ಭೋದಿಸಿದರು. ಸುಚಿತ್ರ ಜನಾರ್ಧನ್ ಕಾರ್ಯಕ್ರಮ ನಿರೂಪುಸಿದರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿಗಳು, ಭೋದಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸ್ಪರ್ಧೆಗಳನ್ನು ನಡೆಯಿತು.










