
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇವರ ಸಹಭಾಗಿತ್ವದಲ್ಲಿ ಡಿ.15 ಮತ್ತು 16ರಂದು ಕೆ.ಪಿ.ಎಸ್ ಶಾಲಾ ಮೈದಾನದಲ್ಲಿ ರೋವರ್ಸ್- ರೇಂಜರ್ಸ್ ಸಮಾಗಮ ಹಾಗೂ ಸ್ಕೌಟ್ಸ್ ಗೈಡ್ಸ್ ಮೇಳ ನಡೆಯಿತು.














ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ರಾಜೀವಿ ರೈ ಉದ್ಘಾಟಿಸಿ ಶುಭ ಹಾರೈಸಿದರು. ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಹರ್ಷ ಜೋಗಿಬೆಟ್ಟು ಅಧ್ಯಕ್ಷತೆ ವಹಿಸಿದ್ದರು.



ಕಾರ್ಯಕ್ರಮದಲ್ಲಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್, ವಿಮಲಾ ರಂಗಯ್ಯ, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್, ಎಸ್ ಡಿ ಎಂ ಸಿ ಮಾಜಿ ಕಾರ್ಯಾಧ್ಯಕ್ಷ ಶ್ರೀನಾಥ್ ರೈ, ಸ್ಥಳೀಯ ಸಂಸ್ಥೆ ಪಂಜದ ಕಾರ್ಯದರ್ಶಿ ಉದಯ ಕುಮಾರ್ ರೈ, ಭಾರತ್ ಸ್ಕೌಟ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಬಿ. ಕೆ. ಮಾಧವ, ಕೆಪಿಎಸ್ ಪ್ರಾಂಶುಪಾಲ ಜನಾರ್ದನ, ಉಪ ಪ್ರಾಂಶುಪಾಲೆ ಉಮಾಕುಮಾರಿ, ಕೆಪಿಎಸ್ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಮಾಯಿಲಪ್ಪ, ಲಿಂಗಪ್ಪ ಬೆಳ್ಳಾರೆ, ಸೋಮಶೇಖರ ನೇರಳ,ಸಂಯೋಜಕಿ ರಾಜೀವಿ ಹರೀಶ್ ರೈ ಉಪಸ್ಥಿತರಿದ್ದರು.
ಸಂಧ್ಯಾ ಕುಮಾರಿ ವಂದಿಸಿದರು.
ಕಾರ್ಯಕ್ರಮದಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ, ನಗರ ಮೆರವಣಿಗೆ, ಶಿಬಿರಾಗ್ನಿ , ಸರ್ವ ಧರ್ಮ ಪ್ರಾರ್ಥನೆ ನಡೆಯಿತು.







