ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರ ದ ಡಾ.ಕುಲದೀಪ್ ರಾಜಿನಾಮೆ














ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕುಲದೀಪ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ವರದಿಯಾಗಿದೆ.
ಕಳೆದ ಎರಡುವರೆ ವರ್ಷಗಳಿಂದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಇವರಿಗೆ ಸರ್ಕಾರ ಆರು ತಿಂಗಳಿಂದ ವೇತನವನ್ನು ಪಾವತಿಸಿರುವುದಿಲ್ಲ. ಆದ್ದರಿಂದ ರಾಜೀನಾಮೆ ನೀಡಿರುವುದಾಗಿ ತಿಳಿದುಬಂದಿದೆ. ರಾಜ್ಯಾದ್ಯಂತ ಸುಮಾರು 1700 ನೌಕರರು ಕೆಲಸ ನಿರ್ವಹಿಸುತ್ತಿದ್ದು ಅವರಿಗೂ ವೇತನ ಪಾವತಿ ಯಾಗಿರುವುದಿಲ್ಲ ಎಂದು ತಿಳಿದುಬಂದಿದೆ.







