ಗಾಂಧಿನಗರ : ಗುರುಂಪುವಿನಲ್ಲಿ ಅಟೋ ರಿಕ್ಷಾ ಪಲ್ಟಿ- ಅದೃಷ್ಟವಶಾತ್ ಪಾರಾದ ಪ್ರಯಾಣಿಕರು

0

ಸುಳ್ಯ ಗಾಂಧಿನಗರದಿಂದ ಆಲೆಟ್ಟಿ ರಸ್ತೆಯ ಗುರುಂಪು ಎಂಬಲ್ಲಿ ಅಟೋ ರಿಕ್ಷಾ ವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ವರದಿಯಾಗಿದೆ.

ಖಾಸಗಿ ಬಸ್ ನಿಲ್ದಾಣದ ಬಳಿಯ ಅಟೋ ನಿಲ್ದಾಣದ ಪಾರ್ಕಿಂಗ್ ನಲ್ಲಿ ನಿಲ್ಲಿಸುತ್ತಿದ್ದ ಆನಂದ ಎಂಬವರಿಗೆ ಸೇರಿದ ಅಟೋ ರಿಕ್ಷಾ ನಾಗಪಟ್ಟಣ ಕಡೆಗೆ ಸಂಚರಿಸುತ್ತಿದ್ದಾಗ ಗುರುಂಪು ಎಂಬಲ್ಲಿ ರಸ್ತೆ ಮಧ್ಯೆ ಇರುವ ಗುಂಡಿಯನ್ನು ತಪ್ಪಿಸುವ ಕಾರಣದಿಂದ ಎದುರಿನಿಂದ ಬರುತ್ತಿದ್ದ ಬೈಕ್ ಸವಾರ ಬಲಬದಿಯತ್ತ ಬರುವುದನ್ನು ಗಮನಿಸಿದ ರಿಕ್ಷಾ ಚಾಲಕ ಎಡಬದಿಗೆ ತಿರುಗಿಸಿದಾಗ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಪಲ್ಟಿಯಾಯಿತು. ರಿಕ್ಷಾದಲ್ಲಿ ಮಹಿಳೆಯೋರ್ವರು ಮಾತ್ರ ಇದ್ದು ಗಾಯಗೊಂಡರು. ತಕ್ಷಣ ಸೇರಿದ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆಯ ವ್ಯವಸ್ಥೆ ಮಾಡಿದರು. ಚಾಲಕ ಆನಂದ ರವರು ಅಲ್ಪ ಸ್ವಲ್ಪ ಗಾಯಗೊಂಡಿರುತ್ತಾರೆ. ಅಟೋ ರಿಕ್ಷಾ ಸಂಪೂರ್ಣವಾಗಿ ಜಖಂಗೊಂಡಿದೆ. ಸ್ಥಳೀಯರು ರಿಕ್ಷಾವನ್ನು ಮೇಲಕ್ಕೆತ್ತುವಲ್ಲಿ ಸಹಕರಿಸಿದರು.