ಕಾಂತಮಂಗಲ ಬಳಿ ಕಾರು – ದ್ವಿಚಕ್ರ ವಾಹನ ಡಿಕ್ಕಿ

0

ಸ್ಕೂಟಿಯಲ್ಲಿದ್ದ ತಂದೆ ಮತ್ತು ಮಗಳಿಗೆ ಗಾಯ,ಮಂಗಳೂರು ಆಸ್ಪತ್ರೆಗೆ ರವಾನೆ

ಕಾಂತಮಂಗಲ ಬಳಿ ಡಿಸೆಂಬರ್ 26ರಂದು ಸಂಜೆ ಕಾರು ಮತ್ತು ಸ್ಕೂಟಿ ಡಿಕ್ಕಿಯಾಗಿ ಸ್ಕೂಟಿಯಲ್ಲಿದ್ದ ತಂದೆ ಹಾಗೂ ಮಗಳಿಗೆ ಗಂಭೀರ ಗಾಯವಾಗಿದ್ದು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯ ಬಳಿಕ ಅವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಗಾಯಗೊಂಡ ವ್ಯಕ್ತಿ ಮೇನಾಲ ನಿವಾಸಿ ಹಾಜಿ ಅಬ್ಬಾಸ್ ಹಾಗೂ ಅವರ ಪುತ್ರಿ ಎಂದು ತಿಳಿದು ಬಂದಿದ್ದು ಇವರು ಚಲಾಯಿಸುತ್ತಿದ್ದ ಸ್ಕೂಟಿಗೆ ಇದೇ ರಸ್ತೆಯಲ್ಲಿ ಬರುತ್ತಿದ್ದ ಕಾರು ಡಿಕ್ಕಿಯಾಗಿ ಇಬ್ಬರು ರಸ್ತೆಗೆ ಬಿದ್ದ ಕಾರಣದಿಂದ ತಂದೆ ಹಾಗೂ ಮಗಳಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಸುಳ್ಯ ಕೆವಿಜಿ ಆಸ್ಪತ್ರೆಗೆ ತಂದಿದ್ದು ಅಲ್ಲಿ ಪ್ರಥಮ ಚಿಕಿತ್ಸೆಯ ಬಳಿಕ ಅವರನ್ನು ಪ್ರತ್ಯೇಕ ಎರಡು ಆಂಬುಲೆನ್ಸ್ ಗಳಲ್ಲಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ .