














ಮಂಡೆಕೋಲು ಗ್ರಾಮದ ಶ್ರೀ ಶಾಸ್ತಾವು ಫ್ರೆಂಡ್ಸ್ ಯುವಕರ ಬಳಗದ ವತಿಯಿಂದ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಕನ್ಯಾನ ಗಡಿ ಭಾಗದಲ್ಲಿ ರಸ್ತೆ ಬದಿಯ ಕಾಡುಗಳನ್ನು ಕಡಿದು ರಸ್ತೆ ಸಂಚಾರ ಸುಗಮಗೊಳಿಸುವ ಕಾರ್ಯವನ್ನು ಶ್ರಮದಾನದ ಮೂಲಕ ಯಶಸ್ವಿಯಾಗಿ ನೆರವೇರಿಸಲಾಯಿತು.
ಈ ಶ್ರಮದಾನ ಕಾರ್ಯದಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅನುಕೂಲವಾಗಿದ್ದು, ರಸ್ತೆ ಸುರಕ್ಷತೆಯೂ ಹೆಚ್ಚಾಗಿದೆ. ಯುವಕರ ಈ ಸೇವಾ ಮನೋಭಾವವನ್ನು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಂಘದ ಗೌರವ ಅಧ್ಯಕ್ಷರಾದ ಶ್ರೀ ಉದಯಕುಮಾರ್ ಆಚಾರ್, ಸಂಘದ ಅಧ್ಯಕ್ಷರಾದ ಶ್ರೀ ಸುಧಾಕರ ಪೆರಾಜೆ, ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.







