ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ – ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಉತ್ತಮ ಎಸ್.ಡಿ.ಎಂ.ಸಿ ರಾಜ್ಯ ಪ್ರಶಸ್ತಿ, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ

0

ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ವತಿಯಿಂದ ಕೊಡಮಾಡುವ ಉತ್ತಮ ಎಸ್.ಡಿಎಂ.ಸಿ. ರಾಜ್ಯ ಪ್ರಶಸ್ತಿ ಯನ್ನು ಸುಳ್ಯದ ಸರಕಾರಿ ಜೂನಿಯರ್ ಕಾಲೇಜ್ ಇದರ ಎಸ್ ಡಿ ಎಂ ಸಿ ಪಡೆದುಕೊಂಡಿದೆ.
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯ ರವರು ಪಡೆದುಕೊಂಡಿದ್ದಾರೆ.


ಫೆಬ್ರವರಿ 11 ರಂದು ಮಂಗಳೂರಿನ ಪುರಭವನದಲ್ಲಿ ನಡೆದ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ರಾಜ್ಯ ಸಮಾವೇಶದಲ್ಲಿ ಈ ಪ್ರಶಸ್ತಿ ಯನ್ನು ನೀಡಿ ಗೌರವಿಸಲಾಯಿತು. ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಬಡಿಗೇರ್ ಹಾಗೂ ಸಮಿತಿಯ ಸದಸ್ಯರುಗಳು, ಉಪ ಪ್ರಾಂಶುಪಾಲರು ಪ್ರಶಸ್ತಿಯನ್ನು ಪಡೆದುಕೊಂಡರು. ಸಮಾರಂಭದಲ್ಲಿ ಎಸ್.ಡಿ.ಎಂ. ಸಿ. ಉಪಾಧ್ಯಕ್ಷರಾದ ಹಸೈನಾರ್ ಜಯನಗರ, ಸದಸ್ಯರಾದ ಶ್ರೀಮತಿ ವಿಶಾಲ ಸೀತಾರಮ,ಶ್ರೀಮತಿ ಜಯಶ್ರೀ, ಶುಭಾಷ್, ಚಿದಾನಂದ ಗರ್ಗುಂಜ, ಕಬೀರ್ ಜಟ್ಟಿಪಳ್ಳ, ಹಿರಿಯ ವಿಧ್ಯಾರ್ಥಿ ಸಂಘದ ಅಧ್ಯಕ್ಷ ಪಿ ಬಿ ಸುಧಾಕರ್ ರೈ, ಅಮೃತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ ಬಿ ಸದಾಶಿವ ಮೊದಲಾದವರು ಉಪಸ್ಥಿತರಿದ್ದರು.