ಚಂದ್ರಶೇಖರ ಭಟ್ರಿಗೆ ವಿದ್ಯಾರತ್ನ, ಶಿವಪ್ರಸಾದ್ ಕೆ.ವಿ.ಯವರಿಗೆ ಸೇವಾಭೂಷಣ ಪ್ರಶಸ್ತಿ














ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಘಟಕ, ಪುತ್ತೂರು ಮತ್ತು ಕಡಬ ತಾಲೂಕು ಘಟಕ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಶೈಕ್ಷಣಿಕ ಸಮಾವೇಶ ಮತ್ತು ಪದಗ್ರಹಣ ಸಮಾರಂಭ ಮಾ.೧೫ರಂದು ಪುತ್ತೂರಿನ ಕೊಂಬೆಟ್ಟು ಬಂಟರ ಭವನದಲ್ಲಿ ನಡೆಯಲಿದ್ದು ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.
ಪುತ್ತೂರು ತಾಲೂಕಿನಲ್ಲಿ ಶೈಕ್ಷಣಿಕವಾಗಿ ಇಲಾಖೆಯ ವಿವಿಧ ಕಾರ್ಯಕ್ರಮಗಳನ್ನು ಅತ್ಯುತ್ತಮ ರೀತಿಯಲ್ಲಿ ಹಮ್ಮಿಕೊಂಡು ಮಾದರಿ ಸಂಸ್ಥೆಗಳಾಗಿ ರೂಪುಗೊಳ್ಳುವಲ್ಲಿ ಅವಿರತ ಶ್ರಮ ವಹಿಸಿದ್ದಾರೆಂದು ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ ಕೆ.ಸೀತಾರಾಮ ರೈಗಳಿಗೆ ಶೈಕ್ಷಣಿಕ ಸೇವಾ ಸಾಧಕ ಪ್ರಶಸ್ತಿ ೨೦೨೬ಕ್ಕೆ ಆಯ್ಕೆ ಮಾಡಲಾಗಿದೆ.
ಬೋಧಕರ ವಿಭಾಗದಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿ, ಸಂಘದ ವತಿಯಿಂದ ಜಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಅಜ್ಜಾವರ ಸರಕಾರಿ ಪ್ರೌಢಶಾಲಾ ಸಹ ಶಿಕ್ಷಕ ಚಂದ್ರಶೇಖರ ಭಟ್ ಎ. ಇವರನ್ನು ವಿದ್ಯಾರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬೋಧಕೇತರ ವಿಭಾಗದಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿ ಜಿಲ್ಲಾ ಮಟ್ಟದ ಸೇವಾ ಭೂಷಣ ಪ್ರಶಸ್ತಿಗೆ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಶಿವಪ್ರಸಾದ್ ಕೆ.ವಿ.ಯವರು ಭಾಜನರಾಗಿದ್ದಾರೆ.







