ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಸುಳ್ಯ ಎನ್. ಎಂ.ಸಿ. ವಿದ್ಯಾರ್ಥಿನಿ ಆಯ್ಕೆ

0

ಜೆ.ಎಸ್.ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಆಂಡ್ ರಿಸರ್ಚ್ ಮೈಸೂರು ಇವರ ವತಿಯಿಂದ ರಾಷ್ಟ್ರೀಯ ಸೇವಾ ಯೋಜನಾ ಪ್ರಾದೇಶಿಕ ನಿರ್ದೇಶನಾಲಯ ಮತ್ತು ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಕೋಶದ ಸಹಯೋಗದಲ್ಲಿ ಮಾ. 12 ರಿಂದ ಮಾ. 18ರವರೆಗೆ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ದ್ವಿತೀಯ ಬಿ.ಎಸ್‌.ಸಿ ವಿದ್ಯಾರ್ಥಿನಿ ಕು. ಅರ್ಪಿತಾ ಡಿ.ಕೆ ಆಯ್ಕೆಯಾಗಿದ್ದಾರೆ. ಇವರು ಕೋಲ್ಚಾರಿನ ಕೋಳಿಯಡ್ಕ ದಾಮೋದರ ಮತ್ತು ಜಯಲಕ್ಷ್ಮಿ ದಂಪತಿಯ ಪುತ್ರಿ.