













ಪ್ರತಿಫಲ ಫೌಂಡೇಶನ್ ಧಾರವಾಡ,ಸತ್ವಾ ಫೌಂಡೇಶನ್ ಕರ್ನಾಟಕ,ಚಿರಾಯು ಕನ್ನಡ ವಾಹಿನಿ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೊಡಮಾಡುವ ರಾಷ್ಟ್ರೀಯ ನಾಡ ಪ್ರಭು ಕೆಂಪೇಗೌಡ ಪ್ರಶಸ್ತಿಗೆ ಹಿರಿಯ ಸಹಕಾರಿ ಮುಗುಪ್ಪು ಕೂಸಪ್ಪ ಗೌಡರು ಭಾಜನರಾಗಿದ್ದು ಮಾ.15 ರಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕನ್ನಡ ನಾಡು-ನುಡಿ, ನೆಲ-ಜಲ, ಭಾಷೆ, ಸಂಸ್ಕೃತಿ, ಸಂಗೀತ, ಸಾಹಿತ್ಯ, ಕೃಷಿ, ಮಾಧ್ಯಮ, ಶಿಕ್ಷಣ, ಕಲೆ ಈ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಇವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಯಿತು.
ಬೆಂಗಳೂರಿನ ಘನಲಿಂಗ ಶಿವಯೋಗಿ ಸಭಾಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು.
ಕೂಸಪ್ಪ ಗೌಡರು ಸಹಕಾರ ಭಾರತೀಯ ಜಿಲ್ಲಾ ಕಾರ್ಯದರ್ಶಿಯಾಗಿದ್ದು,
ಬಿಜೆಪಿಯ ತಾಲೂಕು ರೈತ ಮೋರ್ಚಾದ ಅಧ್ಯಕ್ಷರಾಗಿ,ಜಿಲ್ಲಾ ಕಾರ್ಯದರ್ಶಿಯಾಗಿ,ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಹಾಗೂ ಧಾರ್ಮಿಕ,ಶೈಕ್ಷಣಿಕ ಕ್ಷೇತ್ರ ಅಲ್ಲದೆ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ತೊಡಗಿಕೊಂಡಿರುವ ಇವರು ಪ್ರಸ್ತುತ ಬೆಳ್ಳಾರೆ ಕಾಮಧೇನು ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಪಂಜ ಲಯನ್ಸ್ ಕ್ಲಬ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಇವರು ಕಳೆದ 16 ವರ್ಷಗಳಿಂದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸ್ವ ಸಹಾಯ ಸಂಘಗಳ ತಾಲೂಕು ಒಕ್ಕೂಟದ ಪದಾಧಿಕಾರಿಯಾಗಿ,ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾಗಿ ತಾಲೂಕು ಒಕ್ಕೂಟದ ಸದಸ್ಯರಾಗಿಯೂ ಇವರು ಸೇವೆ ಸಲ್ಲಿಸಿದ್ದರು.







