ಕೊಲ್ಲಮೊಗ್ರು: ಮೈಮೇಲೆ ಬೆಂಕಿ ತಗುಲಿ ಗಾಯಗೊಂಡಿದ್ದ ಮಹಿಳೆ ಆಸ್ಪತ್ರೆಯಲ್ಲಿ ಮೃತ್ಯು

0

ಕೊಲ್ಲಮೊಗ್ರು ಗ್ರಾಮದ ಶಿರೂರು ಬಳಿಯ ಬೊಳಿಯಾನ ಮನೆಯ ಮಹಿಳೆಯೋರ್ವರ ಮೈಮೇಲೆ ಬೆಂಕಿ ತಗಲಿ ಗಾಯಗೊಂಡಿದ್ದು, 1೦ ದಿನಗಳ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.

ಬೊಳಿಯಾನ ಮನೆ ದಿ. ಚಿನ್ನಪ್ಪ ಗೌಡ ಸುಬ್ರಹ್ಮಣ್ಯ ಅವರ ಪತ್ನಿ ತಿಲಕ ಮಾ.1೦ ರಂದು ಅಡುಗೆ ಮನೆಯಲ್ಲಿ ಬೆಳಿಗ್ಗೆ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಸೀರೆಗೆ ಬೆಂಕಿ ಹಿಡಿದು ತಿಲಕರವರ ಮೈಮೇಲೆ ಬೆಂಕಿ ಹಿಡಿದು ಗಂಭೀರವಾಗಿ ಸುಟ್ಟ ಗಾಯವಾಗಿತ್ತು. ಬಳಿಕ ಸುಳ್ಯ ಕೆ.ವಿ.ಜಿ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಅವರನ್ನು ಮತ್ತೆ ಸುಳ್ಯ ಕೆ.ವಿ.ಜಿ ಆಸ್ಪತ್ರೆಗೆ ತರಲಾಗಿತ್ತು. ಅವರು ಮಾ.2೦ ರಂದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತರು ಪುತ್ರ ಸುಬ್ರಹ್ಮಣ್ಯ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿರುವುದಾಗಿ ತಿಳಿದು ಬಂದಿದೆ.