ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳಿಗೆ ಇಂಟರ್ನ್ಯಾಷನಲ್ ಲಿಟಲ್ ಸ್ಟಾರ್ ಒಲಂಪಿಯಾಡ್ ಪರೀಕ್ಷೆಯಲ್ಲಿ ಹಲವು ಪ್ರಶಸ್ತಿ

0

ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ನ ವಿದ್ಯಾರ್ಥಿಗಳು ಸಿಲ್ವರ್ ಜೋನ್ ಫೌಂಡೇಶನ್ ಒಲಂಪಿಯಾಡ್ ನ್ಯೂ ಡೆಲ್ಲಿ ಆಯೋಜಿಸಿರುವ “ಇಂಟರ್ನ್ಯಾಷನಲ್ ಲಿಟಲ್ ಸ್ಟಾರ್ ಒಲಂಪಿಯಾಡ್ ಇಂಗ್ಲಿಷ್” ಪರೀಕ್ಷೆಯಲ್ಲಿ ಒಟ್ಟು 10 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅದರಲ್ಲಿ ಆರು ವಿದ್ಯಾರ್ಥಿಗಳು ಚಿನ್ನದ ಪದಕ ಮತ್ತು ನಾಲ್ಕು ವಿದ್ಯಾರ್ಥಿಗಳು ಬೆಳ್ಳಿಯ ಪದಕಗಳನ್ನು ಪಡೆದುಕೊಂಡಿದ್ದಾರೆ.

“ಲಿಟಲ್ ಸ್ಟಾರ್ ಒಲಂಪಿಯಾಡ್ ಗಣಿತ” ಪರೀಕ್ಷೆಯಲ್ಲಿ ಒಟ್ಟು 10 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅದರಲ್ಲಿ ಐದು ವಿದ್ಯಾರ್ಥಿಗಳು ಚಿನ್ನದ ಪದಕ, ಒಂದು ಬೆಳ್ಳಿಯ ಪದಕ ಮತ್ತು ಒಂದು ಕಂಚಿನ ಪದಕ ಪಡೆದುಕೊಂಡಿದ್ದಾರೆ. ಶಾಲಾ ಅಧ್ಯಕ್ಷರಾದ ಶ್ರೀ ರುಕ್ಮಯ್ಯ ದಾಸ್ ರವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ, ಪದಕ ಹಾಗೂ ಬಹುಮಾನಗಳನ್ನು ನೀಡಿ ಅಭಿನಂದಿಸಿದರು ಮತ್ತು ಶಾಲಾ ಪ್ರಾಂಶುಪಾಲಾರದ ಶ್ರೀಮತಿ ಶೋಭಾ ಕಿಶೋರ್ ಅವರು ಮಕ್ಕಳಿಗೆ ಶುಭ ಹಾರೈಸಿದರು ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಪ್ರಶಸ್ತಿ ಪತ್ರ ಮತ್ತು ಬಹುಮಾನಗಳನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರು, ಶಾಲಾ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.