ಕೆ ಎಫ್ ಡಿ ಸಿ ಕಾರ್ಮಿಕ ಸಂಘಟನೆ ವತಿಯಿಂದ ಏ.1ರಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ಮತ್ತು ಧರಣಿ ಸತ್ಯಾಗ್ರಹ

0

ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಕಾರ್ಮಿಕ ಒಕ್ಕೂಟ ಸಂಘದ ಮುಖಂಡರು

ಸುಳ್ಯ: ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ಏ.1ರಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ಮತ್ತು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಮುಖಂಡರು ತಿಳಿಸಿದ್ದಾರೆ.

ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಮಾ 25 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಕಾರ್ಮಿಕ ಸಂಘಟನೆಯ ಮುಖಂಡ ಜೀವರತ್ನರವರು ‘ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮಸುಳ್ಯ-ಐವರ್ನಾಡು- ಸುಬ್ರಹ್ಮಣ್ಯ ವಿಭಾಗದ ರಬ್ಬರ್ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ವಿವಿಧ ಬೇಡಿಕೆಗಳ ಬಗ್ಗೆ ಹಲವಾರು ಸಮಯಗಳಿಂದ ಸಂಬಂಧಪಟ್ಟವರ ಗಮನಕ್ಕೆ ನೀಡುತ್ತಿದ್ದೇವೆ. ಆದರೆ ಈವರೆಗೆ ಯಾವುದೇ ಸ್ಪಂದನೆ ಅವರಿಂದ ದೊರಕುತ್ತಿಲ್ಲ. ನಮ್ಮ ಬೇಡಿಕೆಗಳನ್ನು ಆದಷ್ಟು ಶೀಘ್ರದಲ್ಲಿ ಇತ್ಯರ್ಥ ಪಡಿಸಬೇಕು ಈ ಬೇಡಿಕೆಯನ್ನು ಇಟ್ಟು ಏ. 1 ರಂದು ಕಾರ್ಮಿಕ ಸಂಘಟನೆಗಳ ಒಕ್ಕೂಟ ಅನಿರ್ದಿಷ್ಟಾ ಅವಧಿ ಪ್ರತಿಭಟನೆ ಹೋರಾಟ ಮತ್ತು ಧರಣಿ ಸತ್ಯಾಗ್ರಹವನ್ನು ನಡೆಸಲು ನಿರ್ಧರಿಸಿದೆ ಎಂದು ಹೇಳಿದರು.

ನಿಗಮದಲ್ಲಿ ಶೇ.60ರಷ್ಟು ನಿರಂತರ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಈ ಕಾರ್ಮಿಕರನ್ನು ಖಾಯಂಗೊಳಿಸಬೇಕು, ಮತ್ತು ಕಾರ್ಮಿಕರಿಗೆ ನೀಡಲು ಬಾಕಿ ಇರುವ ವೇತನವನ್ನು ಕೂಡಲೇ ಪಾವತಿಸಬೇಕು, ಕಾರ್ಮಿಕರ ಕುಟುಂಬದ ಸದಸ್ಯರಿಗೆ ಅನುಕಂಪ ಆಧಾರಿತ ಕೆಲಸವನ್ನು ನೀಡಬೇಕು. ಮೇಸ್ತ್ರಿ ಕಾರ್ಮಿಕರ ನೇಮಕಾತಿ ಮಾಡಬೇಕು, ಎಲ್ಲಾ ಕಾರ್ಮಿಕರಿಗೆ ಇಎಸ್‌ಐ ಸೌಲಭ್ಯವನ್ನು ನೀಡಬೇಕು ಹಾಗೂ ಮುಂತಾದ ಬೇಡಿಕೆಗಳನ್ನು ಮುಂದಿರಿಸಿ ಸುಳ್ಯದ ವಿಭಾಗೀಯ ವ್ಯವಸ್ಥಾಪಕರ ಕಛೇರಿಯ ಮುಂಭಾಗದಲ್ಲಿ ಈ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ವಿವರಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಪ್ಲಾಂಟೇಷನ್ ಮತ್ತು ಇಂಡಸ್ಟ್ರೀಯಲ್ ವರ್ಕರ್ಸ್ ಟ್ರೇಡ್ ಯೂನಿಯನ್, ಜನರಲ್ ಎಂಪ್ಲಾಯಿಸ್ ಯೂನಿಯನ್, ತೋಟ ತೊಳಿಲಾಲ‌ರ್ ಸಂಘ, ಕರ್ನಾಟಕ ತೋಟ ಮಜ್ದೂರ್ ಸಂಘ, ಕೆಎಫ್‌ಡಿ.ಸಿ. ಲೇಬರರ್ಸ್ ಯೂನಿಯನ್‌ ಕಾರ್ಮಿಕ ಸಂಘಟನೆಗಳು ಭಾಗವಹಿಸಲಿವೆ ಎಂದು ಅವರು ಪ್ರತಿಭಟನೆಯ ಬಗ್ಗೆ ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಕಾರ್ಮಿಕ ಮುಖಂಡರಾದ ಶಿವಕುಮಾ‌ರ್ ಕಂದಡ್ಕ , ಸುಂದರ ಲಿಂಗಂ, ಅರುಣಾಚಲಂ,ಶರತ್ ಕುಮಾರ್, ಶಶಿಕುಮಾ‌ರ್, ಕಾರ್ತಿಕ್, ಕ್ರೂಸ್ ನಾಗಪಟ್ಟಣ ಉಪಸ್ಥಿತರಿದ್ದರು.