ದೇಶದ ಸುಭದ್ರತೆಗಾಗಿ ದುಡಿದ ಮಹಾನ್ ನಾಯಕರುಗಳನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ: ತಹಶೀಲ್ದಾರ್ ಮಂಜುಳಾ














ದೇಶದ ಮಹಾನ್ ನಾಯಕರುಗಳು ನಮ್ಮ ದೇಶದ ಸುಭದ್ರತೆಗಾಗಿ ಅನೇಕ ರೀತಿಯಲ್ಲಿ ದುಡಿದವರು ಮತ್ತು ಅಪಾರ ಕೊಡುಗೆಯನ್ನು ನೀಡಿದವರು ಇದ್ದಾರೆ. ಅಂತಹ ಮಹಾನ್ ನಾಯಕರ ಸಾಲಿನಲ್ಲಿ ಡಾ. ಬಾಬು ಜಗಜೀವನ್ ರಾಮ್ ರವರು ಕೂಡ ಒಬ್ಬರು. ಮಹಾನ್ ವ್ಯಕ್ತಿಗಳ ಜನ್ಮದಿನಾಚರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅವರ ಜೀವನ ಚರಿತ್ರೆಯ ಬಗ್ಗೆ ಎಲ್ಲರಿಗೂ ತಿಳಿಯುವಂತೆ ಆಗುತ್ತದೆ. ಆ ಒಂದು ಸಂದರ್ಭ ಮತ್ತು ಅವಕಾಶ ಇಂದು ಸುಳ್ಯ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನಡೆದಿದೆ ಎಂದು ಸುಳ್ಯ ತಹಶೀಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಮಂಜುಳಾರವರು ಹೇಳಿದ್ದಾರೆ.
ಅವರು ಎ. ೫ ರಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜ್ಜೀವನ ರಾಮ್ ರವರ ೧೧೯ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫಾರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ‘ಬಾಬು ಜಗಜೀವನ ರಾಮರವರ ಆದರ್ಶ ಜೀವನದ ಬಗ್ಗೆ ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಕರ್ನಾಟಕ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಸುಳ್ಯ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸುಳ್ಯ ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮಮತಾ ಕೆ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ‘ಬಾಬು ಜಗಜ್ಜೀವನ ರಾಮರವರ ಬಾಲ್ಯ ಜೀವನ, ವಿದ್ಯಾರ್ಥಿ ಜೀವನ, ಸಾಮಾಜಿಕ ಹಾಗೂ ರಾಜಕೀಯ ಜೀವನದಲ್ಲಿ ಮಾಡಿರುವ ಸಾಧನೆಗಳ ಬಗ್ಗೆ ಮತ್ತು ಅವರ ಉತ್ತಮ ಹಾದಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಆರಂಭದಲ್ಲಿ ಬಾಬು ಜಗಜೀವನ ರಾಮ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಯಿತು. ಕಾರ್ಯಕ್ರಮದಲ್ಲಿ ಮುಖಂಡರುಗಳಾದ ಕರುಣಾಕರ ಪಲ್ಲತ್ತಡ್ಕ ಮಹೇಶ್ ಬೆಳ್ಳಾರ್ಕರ್, ಡಿ ಎಂ ಶಾರಿಕ್, ಕ್ಷೇತ್ರ ಶಿಕ್ಷಣ ಇಲಾಖೆಯ ಸಮನ್ವಯಧಿಕಾರಿ ಶ್ರೀಮತಿ ಶೀತಲ್ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು, ತಾಲೂಕಿನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮುಖಂಡರುಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕೃಷ್ಣ ಬಿ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ವಿಶ್ವನಾಥ್ ವಂದಿಸಿದರು.








