













ಸುಳ್ಯದ ಶ್ರೀ ಗುರು ರಾಘವೇಂದ್ರ ಮಠದ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಗುರು ರಾಘವೇಂದ್ರ ಮಠ ಹಾಗೂ ಬೃಂದಾವನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡುವ ಎರಡನೇ ಶ್ರೀ ಗುರು ರಾಘವೇಂದ್ರಾನುಗ್ರಹ ಪ್ರಶಸ್ತಿ ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅವರಿಗೆ ಪ್ರಥಮ ಪ್ರಶಸ್ತಿಯನ್ನು ಪರಿಸರ ತಜ್ಞ ಡಾ.ಆರ್.ಕೆ.ನಾಯರ್ ಅವರಿಗೆ ನೀಡಲಾಗಿತ್ತು.
ಪ್ರತಿಷ್ಠಾ ವಾರ್ಷಿಕ ಮಹೋತ್ಸವದ ಎರಡನೇ ದಿನ ಏ.೨೨ರಂದು ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮ ದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ ತಿಳಿಸಿದ್ದಾರೆ.







