ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವವು ಎ. 26 ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.














ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಶ್ರೀ ಪುಣ್ಯಾಹ ವಾಚನ, ಮಹಾಗಣಪತಿ ಹೋಮ, ಪಂಚ ವಿಂಶತಿ ಕಲಶ ಪೂಜೆ, ಮಧ್ಯಾಹ್ನ ಶ್ರೀ ದೇವರಿಗೆ ಸಾನಿಧ್ಯ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಭಜನಾ ಕಾರ್ಯಕ್ರಮ, ದೇವತಾ ಪ್ರಾರ್ಥನೆ ಮತ್ತು ಸೇವಾ ರಂಗಪೂಜೆ, ರಾತ್ರಿ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿರುವುದು ಎಂದು ಆಡಳಿತ ಸಮಿತಿ ತಿಳಿಸಿದೆ.







