ಇಂದು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ, ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ














ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಎ.27 ರಿಂದ ನರಸಿಂಹ ಜಯಂತಿಯ ಕಾರ್ಯಕ್ರಮ ಆರಂಭಗೊಂಡಿದ್ದು
ಎ.28 (ಇಂದು) ಬೆಳಗ್ಗೆ ಗಣಹೋಮ ಮತ್ತು ಶ್ರೀ ನರಸಿಂಹ ಹೋಮ, ಶ್ರೀ ವೇದವ್ಯಾಸ ಜಯಂತೀ, ವಸಂತ ಪೂಜೆ ನಡೆಯಿತು. ಮಠದ ಪೀಠಾಧಿಪತಿ ವಿದ್ಯಾಪ್ರಸನ್ನ ಶ್ರೀಗಳು, ಮಠದ ದಿವಾನರಾದ ಸುದರ್ಶನ ಜೋಯಿಸ ಮತ್ತಿತರರು ಪುಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.

ಇಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು , ಶ್ರೀ ಎಡನೀರು ಮಠದ ಪರಮಪೂಜ್ಯ ಸಚ್ಚಿದಾನಂದ ಭಾರತೀ ಶ್ರೀಗಳು ಮಾಡಲಿದ್ದಾರೆ.
ಬಳಿಕ ವಿದ್ವಾನ್ ಕುನ್ನಕುಡಿ ಬಾಲಮುರಳಿಕೃಷ್ಣ ಚೆನ್ನೈ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ.










