














ದುಗ್ಗಲಡ್ಕ ಕೊಯಿಕುಳಿ ಶ್ರೀಕೃಷ್ಣ ಸೇವಾ ಸಮಿತಿ ವತಿಯಿಂದ ಶ್ರೀ ಕೃಷ್ಣ ಮಂದಿರದ ವಾರ್ಷಿಕೋತ್ಸವದ ಪ್ರಯುಕ್ತ ಗಣಹೋಮ ಮತ್ತು ಸತ್ಯನಾರಾಯಣ ದೇವರ ಪೂಜೆ ಮೇ 17 ರಂದು ನಡೆಯಿತು.

ಬೆಳಿಗ್ಗೆ ಭಜನಾ ಕಾರ್ಯಕ್ರಮ, ಸುಳ್ಯ ಸ.ಪ.ಪೂ.ಕಾಲೇಜು ಉಪಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯರಿಂದ ಧಾರ್ಮಿಕ ಉಪನ್ಯಾಸ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಅಪರಾಹ್ನ ಅತಿಥಿ ಕಲಾವಿದರಿಂದ ಕರ್ಣಪರ್ವ ಯಕ್ಷಗಾನ ತಾಳಮದ್ದಳೆ, ಸಂಜೆ ಭಜನಾ ಕಾರ್ಯಕ್ರಮ ನಡೆಯಿತು.
ಸುಬ್ರಹ್ಮಣ್ಯ ಭಟ್ ರೆಂಜಾಳ ವೈದಿಕ ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಮಂದಿರದ ಸ್ಥಾಪಕರಾದ ಎಂ.ಸ್ವಯಂಪ್ರಕಾಶ್ ನೀರಬಿದಿರೆ, ಸೇವಾ ಸಮಿತಿಯ ಅಧ್ಯಕ್ಷ ಶಶಿಧರ ಎಂ.ಜೆ., ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ, ಕೋಶಾಧಿಕಾರಿ ಭಾಸ್ಕರ ಪೂಜಾರಿ ಬಾಜಿನಡ್ಕ, ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.








