ಸುಳ್ಯದ ಕೆ.ವಿ.ಜಿ. ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ನಲ್ಲಿ ಪದವಿ ಪ್ರದಾನ ಸಮಾರಂಭ

0

ಸುಳ್ಯದ ಕೆ.ವಿ.ಜಿ. ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ನ 2026ನೇ ಸಾಲಿನ ಪದವಿ ಪ್ರದಾನ ಸಮಾರಂಭವು ಮೇ 16ರಂದು ಕೆ.ವಿ.ಜಿ. ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ನಡಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಒಎಲ್ಇ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ವಹಿಸಿ, ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ರಿಜಿಸ್ಟ್ರಾರ್ ಡಾ. ರಿಯಾಝ್ ಬಾಷಾ ಎಸ್. ಭಾಗವಹಿಸಿ ಮಾತನಾಡಿ ಇಂದು ನಿಮ್ಮ ಜೀವನದ ಅತ್ಯಂತ ಮಹತ್ವದ ದಿನಗಳಲ್ಲಿ ಒಂದಾಗಿದೆ. ಹಲವು ವರ್ಷಗಳ ಪರಿಶ್ರಮ, ತ್ಯಾಗ ಮತ್ತು ಸಮರ್ಪಣೆಯ ಫಲವಾಗಿ ನೀವು ಇಂದು ಪದವೀಧರರಾಗುತ್ತಿದ್ದೀರಿ ಸಮಾಜದಲ್ಲಿ ವೈದ್ಯಕೀಯ ಕ್ಷೇತ್ರದ ಬೆನ್ನೆಲುಬಾಗಿ ನರ್ಸಿಂಗ್ ವೃತ್ತಿ ಕಾರ್ಯನಿರ್ವಹಿಸುತ್ತಿದೆ. ನಿಮ್ಮ ಪೋಷಕರು ನಿಮಗಾಗಿ ಮಾಡಿದ ತ್ಯಾಗವನ್ನು ಸದಾ ಗೌರವಿಸಿ ಎಂದರು. ಗೌರವ ಅತಿಥಿಯಾಗಿ ಕೆ.ವಿ.ಜಿ.ಎಂ.ಸಿ.ಎಚ್ ಡೀನ್ ಡಾ. ನೀಲಾಂಬಿಕೈ ನಟರಾಜನ್ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭ ಕೋರಿದರು.
ವೇದಿಕೆಯಲ್ಲಿ ಅಕಾಡೆಮಿ ಆಫ್ ಎಒಎಲ್ಇ ಉಪಾಧ್ಯಕ್ಷೆ ಶ್ರೀಮತಿ ಶೋಭಾ ಚಿದಾನಂದ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ರಿಜಿಸ್ಟ್ರಾರ್ ಡಾ. ಸಂದೇಶ್ ಕೆ.ಎಸ್, ಸಂಸ್ಥೆಯ ಪ್ರಾಂಶುಪಾಲರಾದ ಡಾ. ಪ್ರಮೋದ್ ಕೆ.ಜೆ. ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಪ್ರಾಂಶುಪಾಲರು ಚಂದ್ರಾವತಿ ಕೆ.ಎಸ್, ಕ್ಲಿನಿಕಲ್ ಕೋರ್ಡಿನೇಟರ್ ಮರಿಯಾ ಒಲಿವರ್ ಉಪಸ್ಥಿತರಿದ್ದರು.
ಡಿವಿನ ರೋಸ್ ಮತ್ತು ತಂಡ ಪ್ರಾರ್ಥಿಸಿದರು. ಡಾ. ಪ್ರಮೋದ್ ಕೆಜೆ ಸ್ವಾಗತಿಸಿ, ಪ್ರೊ. ಶಿಲ್ಪಾ ಎನ್.ಎಂ ವಂದಿಸಿದರು. ಚಂದ್ರಾವತಿ ಕೆ.ಎಸ್ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.