ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ಉನ್ನತ ವ್ಯಾಸಂಗದಲ್ಲಿ ಭಾಷಾ ಕಲಿಕೆಯ ಮಹತ್ವ ಕುರಿತು ಉಪನ್ಯಾಸ ಕಾರ್ಯಕ್ರಮ

0

ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ, ಕೇರಳದ ಕೇಂದ್ರೀಯ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕನ್ನಡ ಮತ್ತು ಹಿಂದಿ ವಿಭಾಗದ ವತಿಯಿಂದ “ಉನ್ನತ ವ್ಯಾಸಂಗದಲ್ಲಿ ಭಾಷಾ ಕಲಿಕೆಯ ಮಹತ್ವ “ಕುರಿತು ದಿನಾಂಕ ೨೧-೦೬-೨೦೨೬ ರಂದು ಉಪನ್ಯಾಸ ಕಾರ್ಯಕ್ರಮವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಸತೀಶ್.ಎನ್.ಪಿ.ರವರು ವಹಿಸಿದ್ದರು.ಹಾಗೆಯೇ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಕೇರಳ ಕೇಂದ್ರೀಯ ವಿಶ್ವ ವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಸೌಮ್ಯ.ಹೆಚ್.ರವರು ಹಾಗೂ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ರಾಮ್ ಬಿನೋದ್ ರಾಯ್ ರವರು ಆಗಮಿಸಿದ್ದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗದ ವಿಭಾಗಾಧ್ಯಕ್ಷರಾಗಿರುವ ರಾಮಕೃಷ್ಣ ಕೆ.ಎಸ್.ರವರು ಸರ್ವರನ್ನು ಸ್ವಾಗತಿಸಿದರು.ತದನಂತರ ಸಂಪನ್ಮೂಲ ವ್ಯಕ್ತಿಗಳಾದಂತಹ ಡಾ.ಸೌಮ್ಯ.ಹೆಚ್.ರವರು ಹಾಗೂ ಡಾ.ರಾಮ್ ಬಿನೋದ್ ರಾಯ್ ರವರು ವಿದ್ಯಾರ್ಥಿಗಳಲ್ಲಿದ್ದ ಉನ್ನತ ವ್ಯಾಸಂಗದ ಕುರಿತಾದ ಗೊಂದಲವನ್ನು ದೂರಗೊಳಿಸಿ ಅದರ ಮಹತ್ವವನ್ನು ಸವಿಸ್ತಾರವಾಗಿ ತಿಳಿಸಿದರು.ಅಲ್ಲದೇ ಕನ್ನಡ ಮತ್ತು ಹಿಂದಿ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಕನ್ನಡ ರಸಪ್ರಶ್ನೆ ಸ್ಪರ್ಧೆಯಲ್ಲಿ ಕುಮಾರಿ ತನ್ಮಯಿ ಪ್ರಥಮ ಸ್ಥಾನವನ್ನು,ಕು. ಬೃಂದಾ ದ್ವಿತೀಯ ಸ್ಥಾನವನ್ನು,ಕು. ತಜ್ಞಾ ತೃತೀಯ ಸ್ಥಾನವನ್ನು ಪಡೆದುಕೊಂಡರು.ಹಿಂದಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಕುಮಾರ ನಿತೀಶ್ ಪ್ರಥಮ ಸ್ಥಾನವನ್ನು, ಕುಮಾರಿ ಶ್ರೀರಕ್ಷಾ ದ್ವಿತೀಯ ಸ್ಥಾನವನ್ನು, ಕುಮಾರಿ ವಕ್ಷಿತಾ ತೃತೀಯ ಸ್ಥಾನವನ್ನು ಪಡೆದುಕೊಂಡರು. ಹಿಂದಿ ಪ್ರಬಂಧ ಸ್ಪರ್ಧೆಯಲ್ಲಿ ಕು. ಪಂಚಮಿ ಪ್ರಥಮ ಸ್ಥಾನ, ಕುಮಾರ ನಿತೀಶ್ ದ್ವಿತೀಯ ಸ್ಥಾನ, ಕುಮಾರಿ ಮೈತ್ರಿ ತೃತೀಯ ಸ್ಥಾನವನ್ನು ಪಡೆದುಕೊಂಡರು.ವಿಜೇತ ವಿದ್ಯಾರ್ಥಿಗಳಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಉಪನ್ಯಾಸಕರಾದ ಶ್ರೀಮತಿ ಸರಸ್ವತಿ ಹಾಗೂ ಹಿಂದಿ ವಿಭಾಗದ ಉಪನ್ಯಾಸಕರಾದ ಶ್ರೀಮತಿ ಗೀತಾಕ್ಷಿ ಉಪಸ್ಥಿತರಿದ್ದರು.ಕಾರ್ಯಕ್ರಮದ ಕೊನೆಯಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ಕಿಶೋರ್ ಕುಮಾರ್ ಬಿ.ಡಿ. ಇವರು ಸರ್ವರಿಗೆ ವಂದನೆಯನ್ನು ತಿಳಿಸಿದರು.ಪ್ರಥಮ ಬಿ ಎ ತರಗತಿಯ ಕುಮಾರಿ ಭಾಗ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.