ಒಂದೇ ಕುಟುಂಬದ ನಾಲ್ಕಕ್ಕೂ ಹೆಚ್ಚು ಸದಸ್ಯರಿಗೆ ಸಣ್ಣ ಪುಟ್ಟ ಗಾಯ, ಅಪಾಯದಿಂದ ಪಾರು














ಕನಕಮಜಲು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಒಂದೇ ಕುಟುಂಬದ ನಾಲ್ಕಕ್ಕೂ ಹೆಚ್ಚು ಮಂದಿ ಸದಸ್ಯರಿಗೆ ಸಣ್ಣಪುಟ್ಟ ಗಾಯವಾಗಿ ಅಪಾಯದಿಂದ ಪಾರಾದ ಘಟನೆ ಮೇ 26ರಂದು ರಾತ್ರಿ ಸಂಭವಿಸಿದೆ.
ಗಾಯಗೊಂಡವರು ಗಾಂಧಿನಗರ ನಿವಾಸಿ ಮೊಹಿದೀನ್ ಮತ್ತು ಅವರ ಕುಟುಂಬದ ಸದಸ್ಯರುಗಳಾಗಿದ್ದು ನಿನ್ನೆ ಮಾಣಿ ಬಳಿ ದ್ವಿಚಕ್ರ ವಾಹನ ಅಪಘಾತದಲ್ಲಿ ಮರಣ ಹೊಂದಿದ ಖಲಂದರ್ ಷಾ ರವರ ತಂದೆ ಮತ್ತು ಮನೆಯವರಾಗಿದ್ದಾರೆ.
ಸುಳ್ಯದಿಂದ ಪುತ್ತೂರು ಕಡೆ ಹೋಗುತ್ತಿದ್ದ ಸಂದರ್ಭ ಈ ಅವಘಡ ಸಂಭವಿಸಿದ್ದು
ಕಾರಿನಲ್ಲಿ ಓರ್ವ ಗರ್ಭಿಣಿ ಮಹಿಳೆ ಇದ್ದು ಅವರಿಗೂ ಕೂಡ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದ್ದು ಗಾಯಾಳುಗಳನ್ನು ಪುತ್ತೂರು ಮಿಡ್ ಲ್ಯಾಂಡ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.







