ಮನೆ ಬಿಟ್ಟು ಪರಾರಿಯಾದ 17 ವರ್ಷದ ಬಾಲಕ














ಸುಳ್ಯ : ಮನೆಯಲ್ಲಿ ಮೊಬೈಲ್ ನೋಡುತ್ತಾ ಕೂತಿದ್ದ ಮಗನಿಗೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಕೋಪಗೊಂಡು ಮಗ ಮನೆ ಬಿಟ್ಟು ಹೋಗಿದ್ದಾರೆ ಎಂಬ ಆರೋಪ ಇದೀಗ ಕೇಳಿ ಬಂದಿದ್ದು ಈ ಬಗ್ಗೆ ಬಾಲಕನ ತಾಯಿ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಉತ್ತರ ಕನ್ನಡ, ಶಿರಸಿ ನಿವಾಸಿ ಸಲ್ಮಾ (40) ಎಂಬವರ ದೂರಿನಂತೆ, ಪ್ರಸ್ತುತ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆ ಎಂಬಲ್ಲಿ ಪತಿ ಹಾಗೂ ಮಗನೊಂದಿಗೆ ವಾಸವಾಗಿದ್ದು, ದಿನಾಂಕ 30.05.2026 ರಂದು ಬೆಳಿಗ್ಗೆ ಮಗ ಸೈಯದ್ ಆಲಿ ಸೈಯದ್ ಗೌಸ (16) ಎಂಬಾತನಿಗೆ, ಮೊಬೈಲ್ ನೋಡುತ್ತಿರುವ ವಿಚಾರದಲ್ಲಿ ತಾಯಿ ಬೈದು ಬುದ್ದಿಮಾತು ಹೇಳಿದ್ದು, ಸ್ವಲ್ಪ ಹೊತ್ತಿನ ಬಳಿಕ ಮಗ ಮನೆಯಿಂದ ಹೊರಹೋಗಿರುತ್ತಾನೆ. ಆತನು ಮರಳಿ ಮನೆಗೆ ಹಿಂತಿರುಗದಿದ್ದು, ಆತನ ಗೆಳೆಯರಲ್ಲಿ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿ ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ ಎಂಬುದಾಗಿ ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.







