ಮಾಸ್ತಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ತಾಯಂದಿರ ಸಭೆ, ಪೌಷ್ಟಿಕ ಆಹಾರ ಶಿಬಿರ

0


ಬೆಳ್ಳಾರೆಯ ಮಾಸ್ತಿಕಟ್ಟೆ ತಡಗಜೆ ಅಂಗನವಾಡಿ ಕೇಂದ್ರದಲ್ಲಿ ಬಾಲ ವಿಕಾಸ ಸಮಿತಿ ಮತ್ತು ತಾಯಂದಿರ ಸಭೆ, ಪೌಷ್ಟಿಕ ಆಹಾರ ಶಿಬಿರ, ಪೋಷನ್ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಅನ್ನಪ್ರಾಶನ ಕಾರ್ಯಕ್ರಮ ನಡೆಯಿತು. ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಮುಖ್ಯೋಪಾಧ್ಯಾಯ ಮಾಯಿಲಪ್ಪ ಜಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶೈನಿ ಕಿರಣ್ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಸಹಾಯಕಿ ಗುಲಾಬಿ ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಇಂದಿರಾ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.