ಕೊಯಿನಾಡು ಸಮೀಪ ಟೋವಿಂಗ್ ವಾಹನ-ಬೈಕ್ ಅಪಘಾತ

0

ಬೈಕ್ ಸವಾರನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಕೊಯನಾಡು ಸಮೀಪದ ದೇವರಕೊಲ್ಲಿ ಬಳಿ ಟೋವಿಂಗ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಜೂ 5 ರಂದು ನಡೆದಿದೆ.

ಕೇರಳ ನೋಂದಣಿ ಸಂಖ್ಯೆಯ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸವಾರ ಅಪಘಾತದ ವೇಳೆ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಕಾರದೊಂದಿಗೆ ತಾಜುದ್ದೀನ್ ಟರ್ಲಿ ರವರ ಕೆಎಂಸಿಸಿ (KMCC) ಆಂಬ್ಯುಲೆನ್ಸ್ ಮೂಲಕ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗಾಯಗೊಂಡ ವ್ಯಕ್ತಿಯ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.