













ಸುಳ್ಯದ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ಗೆ ನೂತನ ಪ್ರಾಂಶುಪಾಲರಾಗಿ ಅನೀಶ್ ನಾದ್ ಎಂ.ಇ. ಅಧಿಕಾರ ಸ್ವೀಕರಿಸಿದರು.
ಶಾಲಾ ಆಡಳಿತ ಮಂಡಳಿ ಹಾಗೂ ಕೆವಿಜಿ ಸಮೂಹ ಸಂಸ್ಥೆಗಳ ವತಿಯಿಂದ ಸ್ವಾಗತಿಲಾಯಿತು.
ಶೈಕ್ಷಣಿಕ ಕ್ಷೇತ್ರದಲ್ಲಿ 24 ವರ್ಷಗಳ ಶೈಕ್ಷಣಿಕ ಅನುಭವ ಹೊಂದಿರುವ ಅನಿಶ್ ನಾದ್ ರವರು ಬಿ.ಕೆ. ಬಿರ್ಲಾ, ಜಿ.ಡಿ. ಗೊಯೆಂಕಾ ಹಾಗೂ ಎಂಐಟಿ, ವಿ.ಜಿ.ಎಸ್ ಬಾರ್ಶಿ ಮುಂತಾದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಂಶುಪಾಲರಾಗಿ ಹಾಗೂ ಶೈಕ್ಷಣಿಕ ಆಡಳಿತಗಾರರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
ಎಒಎಲ್ಇ ಕಮಿಟಿ ಬಿ ಆಡಳಿತಾಧಿಕಾರಿ ಭವಾನಿಶಂಕರ ಅಡ್ತಲೆ ಸ್ವಾಗತಿಸಿ, ಅನಿಶ್ ನಾದ್ ಅವರ ಅನುಭವ ಮತ್ತು ದೂರದೃಷ್ಟಿಯ ನಾಯಕತ್ವವು ಕೆವಿಜಿ ಐಪಿಎಸ್‌ನ ಶೈಕ್ಷಣಿಕ ಗುಣಮಟ್ಟವನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲಿದೆ ಎಂದರು. ನೂತನ ಕಾರ್ಯಕ್ರಮದಲ್ಲಿ ಕೆವಿಜಿ ಐ.ಪಿ.ಎಸ್ ನ ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಕೆವಿಜಿ ಸಮೂಹ ಸಂಸ್ಥೆಗಳ ವಿವಿಧ ಘಟಕಗಳ ಪ್ರಾಂಶುಪಾಲರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.







