ಜೂ: 17 ಮತ್ತು 18 ರಂದು ಮಂದಿರದ ಪ್ರವೇಶೋತ್ಸವ















ಪುತ್ಯ ಪೆರಾಜೆಯ ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂಡಳಿಯ ನೂತನ ಮಂದಿರದ ಪ್ರವೇಶ ಹಾಗೂ ಅನ್ನಪೂರ್ಣೇಶ್ವರಿ ದೇವಿಯ ರಜತ ಉಬ್ಬುಚಿತ್ರ ಸ್ಥಾಪನೆ ಜೂ.18 ರಂದು ನಡೆಯಲಿದ್ದು, ಆ ಪ್ರಯುಕ್ತ ಶ್ರಮದಾನ ನಡೆಯುತ್ತಿದೆ.

ಜೂ.17 ಮತ್ತು 18 ರಂದು ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು, ಧಾರ್ಮಿಕ ಸಭಾ ಕಾರ್ಯಕ್ರಮಗಳೊಂದಿಗೆ ಪ್ರವೇಶೋತ್ಸವ ಕಾರ್ಯಕ್ರಮ ನಡೆಯಲಿದೆ.
ಸಮಿತಿಯ ಗೌರವಾಧ್ಯಕ್ಷ ಮತ್ತು ಪೆರಾಜೆ ಶಾಸ್ತಾವು ದೇವಸ್ಥಾನದ ಮೊಕ್ತೇಸರರಾದ ಜಿತೇಂದ್ರ ನಿಡ್ಯಮಲೆ ಸಹಿತ ಪದಾಧಿಕಾರಿಗಳು, ಸಮಿತಿಯ ಸದಸ್ಯರು, ಊರವರು ಉಪಸ್ಥಿತರಿದ್ದರು.







