ಕೊಯನಾಡು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು, ಪ್ರಯಾಣಿಕರು ಅಪಾಯದಿಂದ ಪಾರು

0

ಕೊಯನಾಡು ಅರಣ್ಯ ಕಚೇರಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಜೂ.10 ರಂದು ರಾತ್ರಿ ಸಂಭವಿಸಿದೆ.

ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ಕೊಯನಾಡು ಅರಣ್ಯ ಕಚೇರಿ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಇಳಿದು ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ . ಘಟನೆಯಲ್ಲಿ ಕಾರಿನ ಮುಂಭಾಗ ಜಖಂಗೊಂಡಿದೆ.