ದುಗ್ಗಲಡ್ಕ ಪ್ರೌಢಶಾಲೆಗೆ ಎಸ್ ಎಸ್ ಎಲ್ ಸಿಯಲ್ಲಿ ಶೇ 100 ಫಲಿತಾಂಶ: ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕರಿಗೆ ಸನ್ಮಾನ

0

ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸಿದ್ದು, ಈ ಸಾಧನೆಗಾಗಿ ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕರಿಗೆ ಸನ್ಮಾನ ಕಾರ್ಯಕ್ರಮ ಜೂ.13 ರಂದು ದುಗ್ಗಲಡ್ಕ ಪ್ರೌಢಶಾಲೆಯಲ್ಲಿ ನಡೆಯಿತು.

ಪ್ರೌಢಶಾಲೆ ಮತ್ತು ಎಸ್.ಡಿ.ಎಂ.ಸಿ ವತಿಯಿಂದ ವಿದ್ಯಾರ್ಥಿಗಳನ್ನು, ಹಿರಿಯ ವಿದ್ಯಾರ್ಥಿ ಸಂಘ ಮತ್ತು ಎಸ್.ಡಿ.ಎಂ.ಸಿ.ವತಿಯಿಂದ ಶಿಕ್ಷಕ ವೃಂದವನ್ನು ಸನ್ಮಾನಿಸಲಾಯಿತು.
ಅಭಿನಂದಿಸಿ ನಿವೃತ್ತ ಮುಖ್ಯ ಶಿಕ್ಷಕ ಚಂದ್ರಶೇಖರ ಗೌಡ ಮೋಂಟಡ್ಕ ಮತ್ತು ಶಿಕ್ಷಕಿ ಗೀತಾ ಮಾತನಾಡಿದರು. ಪೋಷಕರ ಪರವಾಗಿ ಶೈಲಜ ಜಯರಾಜ್ ಮಾತನಾಡಿದರು.ಸಭೆಯ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ.ಅಧ್ಯಕ್ಷೆ ಶ್ರೀಮತಿ ಶೀಲಾವತಿ ಮಾಧವ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಶಿಕ್ಷಕ ಸುರೇಶ್ ಕುಮಾರ್, ಶಿಕ್ಷಣ ಸಂಯೋಜಕ ಉದಯಕುಮಾರ್, ಎಸ್.ಡಿ‌.ಎಂ.ಸಿ.ಮಾಜಿ ಅಧ್ಯಕ್ಷ ನಾರಾಯಣ ಟೈಲರ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಮೇಶ್ ನೀರಬಿದಿರೆ, ಎಸ್.ಡಿ.ಎಂ.ಸಿ.ಸದಸ್ಯರುಗಳಾದ ಜಯರಾಜ್ ನೀರಬಿದಿರೆ, ಲೀಲಾ ಬಾಬು ಮಣಿಯಾಣಿ, ವಾಸುದೇವ, ವೀಣಾ, ಸೀತಮ್ಮ ಉಪಸ್ಥಿತರಿದ್ದರು.
ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾದ ಎಲ್ಲಾ 24 ಮಂದಿಯನ್ನು ಮತ್ತು ಎಲ್ಲಾ ಶಿಕ್ಷಕರನ್ನು, ಅಡುಗೆ ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಸುರೇಶ್ ಕುಮಾರ್ ಸ್ವಾಗತಿಸಿ, ಶಿಕ್ಷಕಿ ಶೋಭಾ ವಂದಿಸಿದರು. ಶಿಕ್ಷಕ ಹರಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮಕ್ಕೆ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ದಿನೇಶ್ ಕೊಯಿಕುಳಿ, ಕೆ.ಟಿ.ಭಾಗೀಶ್ ಸಹಕರಿಸಿದ್ದರು.