ಕಲ್ಲುಗುಂಡಿ ಹೊರ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ- ಆಸ್ಪತ್ರೆಗೆ ದಾಖಲು














ದೇವರಕೊಲ್ಲಿ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಕಲ್ಲುಗುಂಡಿ ಹೊರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಇಬ್ಬರು ಸಿಬ್ಬಂದಿಗಳಿಗೆ ಗಾಯವಾಗಿರುವ ಘಟನೆ ಜೂನ್ ೧೭ರಂದು ನಡೆದಿದೆ.
ಗಾಯಗೊಂಡವರು ಪೊಲೀಸ್ ಸಿಬ್ಬಂದಿ ವಿಕ್ಯಾತ್ ಹಾಗೂ ಇನ್ನೋರ್ವರು ಗೃಹ ರಕ್ಷಕ ದಳದ ಸಿಬ್ಬಂದಿ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸಿ ಮರಳುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ.







